ಸೋಮವಾರ, 8 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೋಹಿತ್, ವಿರಾಟ್ ಇಲ್ಲದ ಭಾರತಕ್ಕೆ ಜಿಂಬಾಬ್ವೆ ಸವಾಲು: ವೇಳಾಪಟ್ಟಿ ಇಲ್ಲಿದೆ

Published 5 ಜುಲೈ 2024, 8:15 IST
Last Updated 5 ಜುಲೈ 2024, 8:15 IST
ಅಕ್ಷರ ಗಾತ್ರ

ಹರಾರೆ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಗೆಲುವಿನ ಹುಮ್ಮಸ್ಸಿನಲ್ಲಿರುವ ಟೀಮ್ ಇಂಡಿಯಾ, ಈಗ ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು ಎದುರು ನೋಡುತ್ತಿದೆ.

ಆದರೆ ವಿಶ್ವಕಪ್ ಗೆದ್ದ ತಂಡದಲ್ಲಿದ್ದ ಬಹುತೇಕ ಆಟಗಾರರಿಗೆ ವಿಶ್ರಾಂತಿ ಸೂಚಿಸಲಾಗಿದೆ. ಅಲ್ಲದೆ ಯುವ ಆಟಗಾರರನ್ನು ಒಳಗೊಂಡ ಟೀಮ್ ಇಂಡಿಯಾ ಈಗಾಗಲೇ ಜಿಂಬಾಬ್ವೆ ಪ್ರವಾಸವನ್ನು ಬೆಳೆಸಿದೆ.

ರೋಹಿತ್, ವಿರಾಟ್ ಇಲ್ಲದ ತಂಡ...

ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಅಂತರರಾಷ್ಟ್ರೀಯ ಟ್ವೆಂಟಿ-20 ವಿಶ್ವಕಪ್ ಟೂರ್ನಿಗೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿದಾಯ ಘೋಷಿಸಿದ್ದರು. ಆ ಮೂಲಕ ಯುವ ಆಟಗಾರರಿಗೆ ಹಾದಿ ಬಿಟ್ಟುಕೊಟ್ಟಿದ್ದರು. ಮುಂದಿನ ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ನಡೆಯಲಿದೆ. ಆ ವೇಳೆಯಾಗುವ ಹೊಸ ತಂಡವನ್ನು ಕಟ್ಟುವ ಸವಾಲು ಬಿಸಿಸಿಐ ಮುಂದಿದೆ.

ತಂಡದಲ್ಲಿ ಯಾರಿದ್ದಾರೆ ?

ವಿಶ್ವಕಪ್ ತಂಡದಲ್ಲಿದ್ದ ಸಂಜು ಸ್ಯಾಮ್ಸನ್, ಶಿವಂ ದುಬೆ ಹಾಗೂ ಯಶಸ್ವಿ ಜೈಸ್ವಾಲ್ ತವರಿಗೆ ಮರಳಲು ವಿಳಂಬಗೊಂಡ ಕಾರಣ ಮೊದಲೆರಡು ಪಂದ್ಯಗಳಿಗೆ ವಿಶ್ರಾಂತಿ ಸೂಚಿಸಲಾಗಿದೆ. ಈ ಮೂವರು ಆಟಗಾರರು ಮೂರನೇ ಪಂದ್ಯದ ವೇಳೆಗೆ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಈ ಮೂವರನ್ನು ಹೊರತುಪಡಿಸಿ ವಿಶ್ವಕಪ್ ತಂಡದಲ್ಲಿದ್ದ ಇತರೆಲ್ಲ ಆಟಗಾರರಿಗೆ ವಿಶ್ರಾಂತಿ ಸೂಚಿಸಲಾಗಿದೆ. ಭಾರತದ ಯುವ ತಂಡವನ್ನು ಶುಭಮನ್ ಗಿಲ್ ಮುನ್ನಡೆಸಲಿದ್ದಾರೆ.

ಮೊದಲೆರಡು ಪಂದ್ಯಗಳಿಗೆ ಭಾರತ ತಂಡ:

ಶುಭಮನ್ ಗಿಲ್ (ನಾಯಕ), ಋತುರಾಜ್ ಗಾಯಕವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಧ್ರುವ್ ಜುರೇಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಆವೇಶ್ ಖಾನ್, ಖಲೀಲ್ ಅಹ್ಮದ್, ಮುಕೇಶ್ ಕುಮಾರ್, ತುಷಾರ್ ದೇಶಪಾಂಡೆ, ಸಾಯಿ ಸುದರ್ಶನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

ಕೊನೆಯ ಮೂರು ಪಂದ್ಯಗಳಿಗೆ ಭಾರತ ತಂಡ:

ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್‌, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರಿಯಾನ್ ಪರಾಗ್, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಆವೇಶ್ ಖಾನ್, ಖಲೀಲ್ ಅಹ್ಮದ್, ಮುಕೇಶ್ ಕುಮಾರ್, ತುಷಾರ್ ದೇಶಪಾಂಡೆ.

ಈ ಮೊದಲು ನಿತೀಶ್ ರೆಡ್ಡಿ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಆದರೆ ಗಾಯದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಶಿವಂ ದುಬೆ ಅವರನ್ನು ಸೇರ್ಪಡೆಗೊಳಿಸಲಾಗಿದೆ.

ವೇಳಾಪಟ್ಟಿ ಇಲ್ಲಿದೆ:

(ಚಿತ್ರ ಕೃಪೆ: ಬಿಸಿಸಿಐ)

(ಚಿತ್ರ ಕೃಪೆ: ಬಿಸಿಸಿಐ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT