ಮೆಕೆ, ಆಸ್ಟ್ರೇಲಿಯಾ (ಪಿಟಿಐ): ಭಾರತ ಎ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಣ ಗುರುವಾರ ಚತುರ್ದಿನ ಕ್ರಿಕೆಟ್ ಪಂದ್ಯವು ಆರಂಭವಾಗಲಿದೆ.

ಭಾರತ ಎ ತಂಡದಲ್ಲಿರುವ ಬ್ಯಾಟರ್ ಅಭಿಮನ್ಯು ಈಶ್ವರನ್, ನಿತೀಶ್ ಕುಮಾರ್ ರೆಡ್ಡಿ ಹಾಗೂ ಕರ್ನಾಟಕದ ವೇಗಿ ಪ್ರಸಿದ್ಧ ಕೃಷ್ಣ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ನ. 22ರಿಂದ ಬಾರ್ಡರ್–ಗಾವಸ್ಕರ್ ಟೆಸ್ಟ್ ಸರಣಿ ಆರಂಭವಾಗಲಿದೆ. ಅದರಿಂದಾಗಿ ಎ ತಂಡಗಳ ನಡುವಣ ಪಂದ್ಯದಲ್ಲಿ ಮಿಂಚುವ ಆಟಗಾರರಿಗೆ ಭಾರತ ಸೀನಿಯರ್ ತಂಡದಲ್ಲಿ ಆಡುವ ಅವಕಾಶ ಗಿಟ್ಟಿಸುವ ಸಾಧ್ಯತೆ ಇದೆ. ಅಜಿತ್ ಆಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಈ ಪಂದ್ಯದ ಮೇಲೆ ನಿಗಾ ವಹಿಸಿದೆ.

ಆತಿಥೇಯ ತಂಡವನ್ನು ನೇಥನ್ ಮ್ಯಾಕ್ಸ್ವೀನಿ ಮುನ್ನಡೆಸಲಿದ್ದಾರೆ. ಭಾರತ ಎ ತಂಡಕ್ಕೆ ಋತುರಾಜ್ ಗಾಯಕವಾಡ ನಾಯಕರಾಗಿದ್ದಾರೆ. ಈ ತಂಡದಲ್ಲಿ ಕರ್ನಾಟಕದ ದೇವದತ್ತ ಪಡಿಕ್ಕಲ್ ಕೂಡ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.