ನವದೆಹಲಿ: ಆಸ್ಟ್ರೇಲಿಯಾದಲ್ಲಿ ಮುಂದಿನ ತಿಂಗಳು ಭಾರತ ತಂಡವು ಆಡಲಿರುವ ಟೆಸ್ಟ್ ಸರಣಿಯ ಮೊದಲ ಅಥವಾ ಎರಡನೇ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ವಿಶ್ರಾಂತಿ ಪಡೆಯುವ ಸಾಧ್ಯತೆ ಇದೆ.

ವೈಯಕ್ತಿಕ ಕಾರಣಗಳಿಂದಾಗಿ ಅವರು ಒಂದು ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ. ಈ ಕುರಿತು ರೋಹಿತ್ ಬಿಸಿಸಿಐಗೆ ಮಾಹಿತಿ ನೀಡಿದ್ದಾರೆನ್ನಲಾಗಿದೆ.

ಆಸ್ಟ್ರೇಲಿಯಾದಲ್ಲಿ ಭಾರತ ತಂಡವು ಐದು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ನವೆಂಬರ್ 22ರಂದು ಮೊದಲ ಟೆಸ್ಟ್ ಪರ್ಥ್‌ನಲ್ಲಿ ಆರಂಭವಾಗಲಿದೆ. ಡಿಸೆಂಬರ್ 6ರಿಂದ 10ರವರೆಗೆ ಅಡಿಲೇಡ್‌ನಲ್ಲಿ ಎರಡನೇ ಪಂದ್ಯ ನಡೆಯಲಿದೆ. ಇವೆರಡರಲ್ಲಿ ಒಂದು ಪಂದ್ಯದಿಂದ ಅವರು ವಿಶ್ರಾಂತಿ ಪಡೆಯಬಹುದು.

‘ರೋಹಿತ್ ಅವರು ಮಂಡಳಿಗೆ ಮಾಹಿತಿ ನೀಡಿದ್ದಾರೆನ್ನಲಾಗಿದೆ. ಆದರೆ ಅವರು ಯಾವ ಪಂದ್ಯದಲ್ಲಿ ಆಡುತ್ತಿಲ್ಲ ಮತ್ತು ಕಾರಣಗಳೇನು ಎಂಬುದರ ಕುರಿತು ಸ್ಪಷ್ಟತೆ ಇಲ್ಲ’ ಎಂದು ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.