ದುಬೈ: ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದಿರುವ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ನ (ಡಬ್ಲ್ಯುಟಿಸಿ) ಪಾಯಿಂಟ್ ಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನಕ್ಕೆ ಏರಿದೆ. ಅಗ್ರಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ಎರಡನೇ ಸ್ಥಾನಕ್ಕೆ ಜಾರಿದೆ.

ಡಬ್ಲ್ಯುಟಿಸಿ ಫೈನಲ್ಗೆ ಮುನ್ನ ಭಾರತಕ್ಕೆ ಆಸ್ಟ್ರೇಲಿಯಾ ವಿರುದ್ಧ ನಾಲ್ಕು ಟೆಸ್ಟ್ ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಈ ಪೈಕಿ ಕನಿಷ್ಠ ಮೂರು ಪಂದ್ಯಗಳನ್ನು ಗೆದ್ದರೆ ಭಾರತ ನೇರವಾಗಿ ಫೈನಲ್ಗೆ ಅರ್ಹತೆ ಪಡೆಯಲಿದೆ. ಅದು ಸಾಧ್ಯವಾಗದಿದ್ದರೆ ಇತರ ತಂಡಗಳ ಪಂದ್ಯಗಳ ಫಲಿತಾಂಶ ನಿರ್ಣಾಯಕವಾಗಲಿದೆ.

ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಭಾರತವು ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ 0–3ರಿಂದ ಸೋತು ಎರಡನೇ ಸ್ಥಾನಕ್ಕೆ ಇಳಿದಿತ್ತು.

‘ಆಸ್ಟ್ರೇಲಿಯಾ ವಿರುದ್ಧ ಮೊದಲ ಪಂದ್ಯದ ಗೆಲುವು ಎರಡು ಬಾರಿಯ ರನ್ನರ್ ಅಪ್ ಭಾರತ ತಂಡವನ್ನು ಮತ್ತೆ ಅಗ್ರಸ್ಥಾನಕ್ಕೆ ಏರಿಸಿದೆ. ಅಲ್ಲದೆ, ಮುಂದಿನ ವರ್ಷ ಲಾರ್ಡ್ಸ್ನಲ್ಲಿ ನಡೆಯುವ ಫೈನಲ್ ಅವಕಾಶವನ್ನು ಮತ್ತಷ್ಟು ಗಟ್ಟಿಗೊಳಿಸಿದೆ’ ಎಂದು ಐಸಿಸಿ ಹೇಳಿದೆ.

ಆಸ್ಟ್ರೇಲಿಯಾ ತಂಡಕ್ಕೆ ಭಾರತ ವಿರುದ್ಧ ನಾಲ್ಕು ಮತ್ತು ಶ್ರೀಲಂಕಾ ವಿರುದ್ಧ ಎರಡು ಟೆಸ್ಟ್ ಪಂದ್ಯಗಳು ಬಾಕಿ ಉಳಿದಿವೆ. ಫೈನಲ್ಗೆ ನೇರ ಅರ್ಹತೆ ಪಡೆಯಲು ಆರು ಪಂದ್ಯಗಳಲ್ಲಿ ನಾಲ್ಕನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
.AUS vs IND Test: ಆಸಿಸ್ ಎದುರು ಭಾರತಕ್ಕೆ ದಾಖಲೆ ಜಯ; ಪಂದ್ಯ ಶ್ರೇಷ್ಠ ಬೂಮ್ರಾ.IND vs AUS Test | ಎರಡನೇ ಪಂದ್ಯದಲ್ಲಿ ರೋಹಿತ್ ಕಣಕ್ಕೆ; ಪಿಂಕ್ ಬಾಲ್ ಅಭ್ಯಾಸ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.