ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡ ನಾಯಕ ಪ್ಯಾಟ್ ಕಮಿನ್ಸ್ ಅವರು ಆಸ್ಟ್ರೇಲಿಯಾಗೆ ಮರಳಿದ್ದಾರೆ. ಕುಟುಂಬದ ಸದಸ್ಯರೊಬ್ಬರು ತೀವ್ರವಾಗಿ ಅನಾರೋಗ್ಯ ಪೀಡಿತರಾಗಿದ್ದರಿಂದ ಅವರು ತವರಿಗೆ ತೆರಳಿದ್ದಾರೆ.

ಮುಂದಿನ ವಾರ ಭಾರತದ ವಿರುದ್ಧ ನಡೆಯಲಿರುವ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೂರನೇ ಪಂದ್ಯದ ವೇಳೆಗೆ ಮತ್ತೆ ಅವರು ಭಾರತಕ್ಕೆ ಮರಳಲಿದ್ದು, ತಂಡವನ್ನು ಕೂಡಿಕೊಳ್ಳಲಿದ್ದಾರೆ.

‘ಕುಟುಂಬ ಸದಸ್ಯರೊಬ್ಬರು ತೀವ್ರವಾಗಿ ಅನಾರೋಗ್ಯಕ್ಕೀಡಾದ ಕಾರಣ, ಪ್ಯಾಟ್ ಕಮಿನ್ಸ್ ಅವರು ತವರಿಗೆ ತೆರಳಿದ್ದಾರೆ‘ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಬಿಡುಗಡೆ ಮಾಡಿರುವ ಮಾಧ್ಯಮ ಪ್ರಕಟಣೆಯಲ್ಲಿ ಹೇಳಿದೆ.

‘ಈ ವಾರಾಂತ್ಯದಲ್ಲಿ ಅವರು ಭಾರತಕ್ಕೆ ಮತ್ತೆ ಮರಳಲಿದ್ದು, ಮೂರನೇ ಟೆಸ್ಟ್‌ಗೆ ಅಭ್ಯಾಸ ಆರಂಭಿಸಲಿದ್ದಾರೆ. ಅವರ ಖಾಸಗಿತನವನ್ನು ಗೌರವಿಸಬೇಕು ಎಂದು ನಾವು ಮಾಧ್ಯಮದವರೊಂದಿಗೆ ವಿನಂತಿ ಮಾಡುತ್ತೇವೆ‘ ಎಂದು ಅದು ಹೇಳಿದೆ.

ಸದ್ಯ ಸಾಗುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದ್ದು, 4 ಟೆಸ್ಟ್‌ಗಳ ಸರಣಿಯಲ್ಲಿ 2–0ರ ಮುನ್ನಡೆ ಕಾಯ್ದುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.