ಶುಕ್ರವಾರ, 27 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

IND vs BAN 2nd Test ಆಕಾಶ್ ದೀಪ್‌ಗೆ 2 ವಿಕೆಟ್; ಊಟದ ವಿರಾಮಕ್ಕೆ ಬಾಂಗ್ಲಾ 74/2

Published : 27 ಸೆಪ್ಟೆಂಬರ್ 2024, 4:42 IST
Last Updated : 27 ಸೆಪ್ಟೆಂಬರ್ 2024, 4:42 IST
ಫಾಲೋ ಮಾಡಿ
Comments

ಕಾನ್ಪುರ: ಪ್ರವಾಸಿ ಬಾಂಗ್ಲಾದೇಶ ವಿರುದ್ಧ ಇಲ್ಲಿನ ಗ್ರೀನ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ಮೊದಲ ದಿನದ ಊಟದ ವಿರಾಮದ ಹೊತ್ತಿಗೆ ಬಾಂಗ್ಲಾದೇಶ 26 ಓವರ್‌ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 74 ರನ್ ಗಳಿಸಿದೆ.

ಆರಂಭಿಕರಾದ ಝಾಕೀರ್ ಹಸನ್ (0) ಹಾಗೂ ಶದ್ಮಾನ್ ಇಸ್ಲಾಂ (24) ಅವರನ್ನು ಬಲಗೈ ವೇಗಿ ಆಕಾಶ್ ದೀಪ್ ಹೊರದಬ್ಬಿದ್ದಾರೆ.

ಮೊಮಿನುಲ್ ಹಕ್ (17*) ಹಾಗೂ ನಾಯಕ ನಜ್ಮುಲ್ ಹುಸೇನ್ ಶಾಂತೊ (28*) ಕ್ರೀಸಿನಲ್ಲಿದ್ದಾರೆ.

ಪಂದ್ಯ ಆರಂಭ ವಿಳಂಬ...

ಗುರುವಾರ ರಾತ್ರಿ ಸುರಿದ ಮಳೆ ಹಾಗೂ ತೇವಾಂಶದಿಂದಾಗಿ ಪಂದ್ಯ ಆರಂಭವು ವಿಳಂಬವಾಯಿತು. ಮೊದಲ ಪಂದ್ಯದಲ್ಲಿ ವಿಜೇತ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ತರಲಾಗಿಲ್ಲ. ಮತ್ತೊಂದೆಡೆ ಬಾಂಗ್ಲಾದೇಶ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ.

ಭಾರತ ತಂಡ ಆಡುವ ಹನ್ನೊಂದರ ಬಳಗ ಇಂತಿದೆ:

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಕೆ.ಎಲ್.ರಾಹುಲ್, ರವೀಂದ್ರ ಜಡೇಜ, ರವಿಚಂದ್ರನ್ ಅಶ್ವಿನ್, ಆಕಾಶ್ ದೀಪ್, ಜಸ್‌ಪ್ರೀತ್ ಬೂಮ್ರಾ ಮತ್ತು ಮೊಹಮ್ಮದ್ ಸಿರಾಜ್.

ದಾಖಲೆ ಮೇಲೆ ಭಾರತ ಕಣ್ಣು...

ದೇಶದಲ್ಲಿ ಹದಿನೆಂಟನೇ ಟೆಸ್ಟ್ ಸರಣಿಯನ್ನು ಜಯಿಸಿ ದಾಖಲೆ ಬರೆಯುವತ್ತ ಆತಿಥೇಯ ಭಾರತ ತಂಡ ಕಣ್ಣಿಟ್ಟಿದೆ.

ಚೆನ್ನೈನಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಭಾರತ 280 ರನ್‌ ಅಂತರದ ಜಯ ಸಾಧಿಸಿತ್ತು. ರವಿಚಂದ್ರನ್ ಅಶ್ವಿನ್ ಶತಕ ಹಾಗೂ ಆರು ವಿಕೆಟ್ ಸಾಧನೆ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT