ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆತಿಥೇಯ ಭಾರತ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಇನಿಂಗ್ಸ್ ಮುನ್ನಡೆ ಗಳಿಸಿದೆ.

ಮಳೆಯಿಂದಾಗಿ ಮೊದಲ ದಿನದಾಟ ಮಳೆಯಿಂದಾಗಿ ರದ್ದಾಗಿತ್ತು. ಎರಡನೇ ದಿನದಾಟದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ದುಕೊಂಡರು.

ಆದರೆ ನ್ಯೂಜಿಲೆಂಡ್ ಬೌಲರ್ಗಳ ಸ್ವಿಂಗ್-ಸೀಮ್ ಸೇರಿದಂತೆ ನಿಖರ ದಾಳಿಯ ಮುಂದೆ ಭಾರತದ ಬ್ಯಾಟರ್ಗಳ ಬಳಿ ಉತ್ತರವೇ ಇರಲಿಲ್ಲ.

ಭಾರತ ತಂಡವು 31.2 ಓವರ್ಗಳಲ್ಲಿ ಕೇವಲ 46 ರನ್ನಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿತು. ಇದು ಟೆಸ್ಟ್ ಕ್ರಿಕೆಟ್ನಲ್ಲಿ ಭಾರತದಿಂದ ದಾಖಲಾದ ಮೂರನೇ ಕನಿಷ್ಠ ಮೊತ್ತವಾಗಿದೆ.

ಟೀಮ್ ಇಂಡಿಯಾದ ಐವರು ಬ್ಯಾಟರ್ಗಳು ಶೂನ್ಯಕ್ಕೆ ಔಟ್ ಆದರು. ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್, ಕೆ.ಎಲ್.ರಾಹುಲ್, ರವೀಂದ್ರ ಜಡೇಜ ಮತ್ತು ರವಿಚಂದ್ರನ್ ಅಶ್ವಿನ್ ಅವರಿಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ರಿಷಭ್ ಪಂತ್ ಗರಿಷ್ಠ 20 ರನ್ ಗಳಿಸಿದರು.

ನ್ಯೂಜಿಲೆಂಡ್ ಪರ ಮ್ಯಾಟ್ ಹೆನ್ರಿ ಐದು (15/5), ವಿಲಿಯಂ ಒ ರೂರ್ಕಿ (22/4) ಮತ್ತು ಟಿಮ್ ಸೌಥಿ (8/1) ಒಂದು ವಿಕೆಟ್ ಗಳಿಸಿ ಮಿಂಚಿದರು. ಈ ಪೈಕಿ ಹೆನ್ರಿ 13.2 ಓವರ್ಗಳಲ್ಲಿ 15 ರನ್ ಮಾತ್ರ ಬಿಟ್ಟುಕೊಟ್ಟಿದ್ದರು. ಹಾಗೆಯೇ ಟೆಸ್ಟ್ ಕ್ರಿಕಟ್ನಲ್ಲಿ 100 ವಿಕೆಟ್ಗಳ ಸಾಧನೆ ಮಾಡಿದರು.

ನ್ಯೂಜಿಲೆಂಡ್ಗೆ ಇನಿಂಗ್ಸ್ ಮುನ್ನಡೆ...

ಬಳಿಕ ದಿಟ್ಟ ಬ್ಯಾಟಿಂಗ್ ನಡೆಸಿದ ನ್ಯೂಜಿಲೆಂಡ್ ಇನಿಂಗ್ಸ್ ಮುನ್ನಡೆ ಗಳಿಸುವಲ್ಲಿ ಯಶಸ್ವಿಯಾಗಿದೆ.

ಎರಡನೇ ದಿನದಾಟದ ಅಂತ್ಯಕ್ಕೆ 50 ಓವರ್ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 180 ರನ್ ಗಳಿಸಿದೆ. ಆ ಮೂಲಕ ಮೊದಲ ಇನಿಂಗ್ಸ್ನಲ್ಲಿ 134 ರನ್ಗಳ ಮುನ್ನಡೆ ಗಳಿಸಿದೆ.

ರಚೀನ್ ರವೀಂದ್ರ (22*) ಹಾಗೂ ಡೆರಿಲ್ ಮಿಚೆಲ್ (14*) ಮೂರನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ನಾಯಕ ಟಾಮ್ ಲೇಥಮ್ 15 ಹಾಗೂ ವಿಲ್ ಯಂಗ್ 33 ರನ್ ಗಳಿಸಿ ಔಟ್ ಆದರು. ಆದರೆ ಕೆಚ್ಚೆದೆಯ ಹೋರಾಟ ತೋರಿದ ಡೆವೊನ್ ಕಾನ್ವೆ 91 ರನ್ ಗಳಿಸಿ ಔಟ್ ಆದರು. ಆ ಮೂಲಕ ಕೇವಲ 9 ರನ್ ಅಂತರದಲ್ಲಿ ಶತಕ ವಂಚಿತರಾದರು.

ಭಾರತದ ಪರ ಕುಲದೀಪ್ ಯಾದವ್, ರವೀಂದ್ರ ಜಡೇಜ ಮತ್ತು ರವಿಚಂದ್ರನ್ ಅಶ್ವಿನ್ ತಲಾ ಒಂದು ವಿಕೆಟ್ ಗಳಿಸಿದರು.
.ಅಡಿಲೇಡ್ನಲ್ಲಿ 36, ಬೆಂಗಳೂರಿನಲ್ಲಿ 46: ಟೀಮ್ ಇಂಡಿಯಾ ಕಳಪೆ ಸಾಧನೆಗಳ ಪಟ್ಟಿ.IND vs NZ: ಕೊಹ್ಲಿ ಸೇರಿದಂತೆ ಸೊನ್ನೆ ಸುತ್ತಿದ ಐವರು ಬ್ಯಾಟರ್ಗಳು!.
ತಂಡಗಳು...

ಭಾರತ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬೂಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್,

ನ್ಯೂಜಿಲೆಂಡ್: ಟಾಮ್ ಲೇಥಮ್ (ನಾಯಕ), ಡೆವೊನ್ ಕಾನ್ವೆ, ವಿಲ್ ಯಂಗ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಟಾಮ್ ಬ್ಲಂಡೆಲ್ (ವಿಕೆಟ್ಕೀಪರ್), ಅಜಾಜ್ ಪಟೇಲ್, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ವಿಲಿಯಂ ಒ ರೂರ್ಕಿ
.IND vs NZ 1st Test Memes: ಗಂಭೀರ್ ಅಡಿಯಲ್ಲಿ ಆರ್ಸಿಬಿ ದಾಖಲೆ ಮುರಿದ ಭಾರತ!.IND vs NZ Test | ಬೂಮ್ರಾ ಉಪನಾಯಕ; ಸಮರ್ಥಿಸಿದ ರೋಹಿತ್ ಶರ್ಮಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.