ಬೆಂಗಳೂರು: ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ (ಬುಧವಾರ) ಆರಂಭವಾಗಲಿದೆ.

ಆದರೆ ಪಂದ್ಯಕ್ಕೆ ಮಳೆಯ ಭೀತಿ ಕಾಡುತ್ತಿದ್ದು, ಅಭಿಮಾನಿಗಳ ನಿರಾಸೆಗೆ ಕಾರಣವಾಗಿದೆ.

ಇಂದು (ಮಂಗಳವಾರ) ಬೆಂಗಳೂರು ನಗರದ ಹಲವೆಡೆ ಎಡೆಬಿಡದೇ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಟೀಮ್ ಇಂಡಿಯಾದ ಅಭ್ಯಾಸದ ಅವಧಿಯನ್ನು ರದ್ದುಗೊಳಿಸಲಾಗಿದೆ.

ಮಳೆ ನಿಂತರೆ ತಕ್ಷಣ ನೀರನ್ನು ಹೊರಗೆ ಹಾಕಿ ಪಂದ್ಯ ಆಡಿಸಲು ಸಾಧ್ಯವಾಗುವ ಅತ್ಯಾಧುನಿಕ ತಂತ್ರಜ್ಞಾನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೆ. ಆದರೆ ಸತತವಾಗಿ ಸುರಿಯುತ್ತಿರುವ ಮಳೆಯು ಚಿಂತೆಗೆ ಕಾರಣವಾಗಿದೆ.

ಅಕ್ಟೋಬರ್ 18ರವರೆಗೂ ನಗರದಲ್ಲಿ ಮಳೆ ಸುರಿಯುವ ಸಾಧ್ಯತೆಯಿದ್ದು, ಮೋಡಯುಕ್ತ ವಾತಾವರಣ ಇರಲಿದೆ ಎಂದು ಮೂಲಗಳು ತಿಳಿಸಿವೆ. ಇದರಿಂದಾಗಿ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಂಭವ ಇದೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ನಲ್ಲಿ ಫೈನಲ್ಗೆ ತಲುಪುವ ಹಿನ್ನೆಲೆಯಲ್ಲಿ ಪ್ರತಿಯೊಂದು ಪಂದ್ಯವೂ ಮುಖ್ಯವೆನಿಸಿದೆ. ಇತ್ತೀಚಿಗಿನ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 2-0 ಅಂತರದ ಕ್ಲೀನ್ ಸ್ವೀಪ್ ಸಾಧನೆ ಮಾಡಿತ್ತು. ಈ ಪೈಕಿ ಮಳೆ ಬಾಧಿತ ಕಾನ್ಪುರ ಟೆಸ್ಟ್ ಪಂದ್ಯದಲ್ಲಿ ಟಿ20 ಶೈಲಿಯಲ್ಲಿ ಆಡಿ ಎಲ್ಲರ ಗಮನವನ್ನು ಸೆಳೆದಿತ್ತು.

ಭಾರತ ತಂಡ ಇಂತಿದೆ:

ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬೂಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೇಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

ಮೀಸಲು ಆಟಗಾರರು: ಹರ್ಷೀತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ, ಮಯಂಕ್ ಯಾದವ್ ಮತ್ತು ಪ್ರಸಿದ್ಧ ಕೃಷ್ಣ.

ಟೆಸ್ಟ್ ಸರಣಿ ವೇಳಾಪಟ್ಟಿ ಇಂತಿದೆ:

ಅ.16ರಿಂದ ಅ.20: ಮೊದಲ ಟೆಸ್ಟ್, ಬೆಂಗಳೂರು

ಅ.24ರಿಂದ ಅ.28: ಎರಡನೇ ಟೆಸ್ಟ್, ಪುಣೆ

ನ.1ರಿಂದ ನ.5: ಮೂರನೇ ಟೆಸ್ಟ್, ಮುಂಬೈ.
.ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ; ಬೂಮ್ರಾ ಉಪನಾಯಕ.IND vs NZ Test | ಬೂಮ್ರಾ ಉಪನಾಯಕ; ಸಮರ್ಥಿಸಿದ ರೋಹಿತ್ ಶರ್ಮಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.