ಕೋಲ್ಕತ್ತ: ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಮೊದಲ ಟಿ–20 ಕ್ರಿಕೆಟ್ ಪಂದ್ಯದಲ್ಲಿ ಪ್ರವಾಸಿ ವೆಸ್ಟ್ ಇಂಡೀಸ್ ತಂಡ ಸ್ಪರ್ಧಾತ್ಮಕ ಮೊತ್ತ ಪೇರಿಸಿದೆ.

ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಆದರಂತೆ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿದೆ.

ವೆಸ್ಟ್ ಇಂಡೀಸ್ ಆರಂಭಿಕ ಆಟಗಾರ ಬ್ರಂಡನ್ ಕಿಂಗ್ (4) ವಿಕೆಟ್ ಕಳೆದುಕೊಳ್ಳುವ ಮೂಲಕ ಆರಂಭಿಕ ಆಘಾತ ಎದುರಿಸಿತು. ಬಳಿಕ ಕ್ರೀಸ್‌ಗೆ ಬಂದ ನಿಕೋಲಸ್ ಪೂರನ್ (61), ಕೈಲ್ ಮೇಯರ್ಸ್ (31), ಕಿರನ್ ಪೊಲಾರ್ಡ್ ಔಟಾಗದೆ 24 ರನ್ ಗಳಿಸಿ ತಂಡಕ್ಕೆ ಆಸರೆಯಾದರು.

ಭಾರತದ ಪರ ರವಿ ಬಿಷ್ಣೋಯಿ 2, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್, ಹರ್ಷಲ್ ಪಟೇಲ್, ಯಜುವೇಂದ್ರ ಚಾಹಲ್ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

ಪದಾರ್ಪಣೆ ಪಂದ್ಯದಲ್ಲಿ 2 ವಿಕೆಟ್ ಪಡೆಯುವಲ್ಲಿ ಸ್ಪಿನ್ನರ್ ರವಿ ಬಿಷ್ಣೋಯಿ ಯಶಸ್ವಿಯಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.