ಬ್ರಿಡ್ಜ್‌ಟೌನ್: ಇಲ್ಲಿ ನಡೆಯುತ್ತಿರುವ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ವೆಸ್ಟ್‌ಇಂಡೀಸ್ ತಂಡ ಕೇವಲ 114 ರನ್‌ಗಳಿಗೆ ಆಲೌಟ್ ಆಗಿದೆ.

ಟಾಸ್ ಗೆದ್ದ ಭಾರತ ತಂಡ ವೆಸ್ಟ್ ಇಂಡೀಸ್‌ಗೆ ಬ್ಯಾಟಿಂಗ್ ಆಹ್ವಾನ ನೀಡಿತ್ತು. ಆದರೆ, ತವರು ಪಿಚ್‌ನಲ್ಲೇ ವಿಂಡೀಸ್ ಆಟಗಾರರು ರನ್ ಗಳಿಸಲು ಪರದಾಡಿದರು. ಶಾಯ್ ಹೋಪ್ 43, ಅಲಿಕ್ ಅಥನಾಜೆ 22 ರನ್ ಗಳಿಸಿದ್ದು ಬಿಟ್ಟರೆ ಬೇರಾವ ಬ್ಯಾಟರ್‌ಗಳು ಸಹ ಭಾರತದ ಬೌಲಿಂಗ್ ದಾಳಿ ಎದುರು ನಿಲ್ಲಲು ಸಾಧ್ಯವಾಗಲಿಲ್ಲ. ನಿರಂತರವಾಗಿ ವಿಕೆಟ್ ಕಳೆದುಕೊಂಡು ಸಾಗಿದ ವಿಂಡೀಸ್ ತಂಡ 23 ಓವರ್‌ಗಳಲ್ಲಿ 114 ರನ್‌ಗಳಿಗೆ ಆಲೌಟ್ ಆಯಿತು.

ಭಾರತದ ಪರ ಕುಲ್ದೀಪ್ ಯಾದವ್ ಕೇವಲ 6 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ರವೀಂದ್ರ ಜಡೇಜ 37 ರನ್ ನೀಡಿ 3 ವಿಕೆಟ್ ಉರುಳಿಸಿದರು.

ಅಲ್ಪ ಮೊತ್ತದ ಗುರಿ ಬೆನ್ನತ್ತಿರುವ ಭಾರತ ಆರಂಭದಲ್ಲೇ ವಿಕೆಟ್ ಕಳೆದುಕೊಂಡಿದೆ. ಶುಭಮನ್ ಗಿಲ್ 7 ರನ್ ಗಳಿಸಿ ಸೀಲ್ಸ್‌ಗೆ ವಿಕೆಟ್ ಒಪ್ಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.