ನವದೆಹಲಿ:ಈಚೆಗಷ್ಟೇ ಏಕದಿನ ಕ್ರಿಕೆಟ್‌ನಲ್ಲಿ ವೇಗದ 11 ಸಾವಿರ ರನ್ ಪೂರೈಸಿದ ದಾಖಲೆ ನಿರ್ಮಿಸಿರುವ ವಿರಾಟ್ ಕೊಹ್ಲಿ ಮತ್ತೊಂದು ಐತಿಹಾಸಿಕ ದಾಖಲೆ ನಿರ್ಮಿಸುವ ಸನಿಹದಲ್ಲಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 20 ಸಾವಿರ ರನ್ ಗಳಿಸಿದ ದಾಖಲೆಗೆ ಪಾತ್ರರಾಗಲು ಅವರಿಗಿನ್ನು 37 ರನ್‌ಗಳ ಅವಶ್ಯಕತೆಯಿದೆ.

ಇದನ್ನೂ ಓದಿ:ವಿರಾಟ್ ದಾಖಲೆಯ ಆಟ; ಏಕದಿನ ಪಂದ್ಯಗಳಲ್ಲಿ ವೇಗದ 11 ಸಾವಿರ ರನ್

ಗುರುವಾರ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಕೊಹ್ಲಿ 37 ರನ್ ಗಳಿಸಿದರೆ ಸಚಿನ್ ತೆಂಡೂಲ್ಕರ್ ಮತ್ತು ಬ್ರಯನ್ ಲಾರಾ ಅವರ ದಾಖಲೆಯನ್ನು ಹಿಂದಿಕ್ಕಲಿದ್ದಾರೆ. ಸದ್ಯ ಸಚಿನ್ ಮತ್ತು ಲಾರಾ ದಾಖಲೆ ಹಂಚಿಕೊಂಡಿದ್ದು, ಇಬ್ಬರೂ 453 ಇನ್ನಿಂಗ್ಸ್‌ಗಳಲ್ಲಿ 20 ಸಾವಿರ ರನ್ ಗಡಿ ದಾಟಿದ್ದಾರೆ.

ಇದನ್ನೂ ಓದಿ:ವೆಸ್ಟ್ ಇಂಡೀಸ್ ಮಾಜಿ ಕ್ರಿಕೆಟಿಗ ಲಾರಾಗೆ ಎದೆ ನೋವು; ಆಸ್ಪತ್ರೆಗೆ ದಾಖಲು

ನಾಳೆಯ ಪಂದ್ಯದಲ್ಲಿ ಕೊಹ್ಲಿ 37 ರನ್ ಗಳಿಸಿದರೆ20 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದ ಭಾರತದ ಮೂರನೇ ಮತ್ತು ವಿಶ್ವ ಕ್ರಿಕೆಟ್‌ನ 12ನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಲಿದ್ದಾರೆ. ಭಾರತದ ಪರ ಸಚಿನ್ (34,357 ರನ್) ಮತ್ತು ರಾಹುಲ್ ದ್ರಾವಿಡ್ (24,208 ರನ್) 20 ಸಾವಿರಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ.

ಈವರೆಗೆ ಕೊಹ್ಲಿ ಒಟ್ಟು 416 ಇನ್ನಿಂಗ್ಸ್ ಆಡಿದ್ದು, ಇದರಲ್ಲಿ ಟೆಸ್ಟ್‌ನ 131, ಏಕದಿನದ 233 ಹಾಗೂ ಟಿ–20ಯ 62 ಇನ್ನಿಂಗ್ಸ್ ಸೇರಿವೆ.

ವೆಸ್ಟ್ ಇಂಡೀಸ್ ವಿರುದ್ಧವೂ ದಾಖಲೆ ಬರೆಯಲು ಅವಕಾಶ

ನಾಳೆಯ ಪಂದ್ಯದಲ್ಲಿ 91 ರನ್ ಗಳಿಸಿದರೆ, ವೆಸ್ಟ್ ಇಂಡೀಸ್ ತಂಡದ ಎದುರು ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ (1840) ಗಳಿಸಿದ ದಾಖಲೆಯೂ ಕೊಹ್ಲಿ ಪಾಲಾಗಲಿದೆ. ಸದ್ಯ ಈ ದಾಖಲೆ ಪಾಕಿಸ್ತಾನದ ಜಾವೇದ್ ಮಿಯಾಂದಾದ್ (1930) ಹೆಸರಿನಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.