ಕೇಪ್‌ಟೌನ್: ಚೊಚ್ಚಲ ಪ್ರಶಸ್ತಿ ನಿರೀಕ್ಷೆಯಲ್ಲಿರುವ ಭಾರತ ತಂಡವು ಮಹಿಳೆಯರ ಟಿ20 ವಿಶ್ವಕಪ್ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಭಾನುವಾರ ಪಾಕಿಸ್ತಾನ ವಿರುದ್ಧ ಏಳು ವಿಕೆಟ್ ಅಂತರದಿಂದ ಗೆಲುವು ಸಾಧಿಸಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತ್ತು. ಬಿಸ್ಮಾ ಮಾರೂಫ್ ಔಟಾಗದೆ 68, ಆಯೇಷಾ ನಸೀಮ್ ಔಟಾಗದೆ 43 ರನ್ ಗಳಿಸಿ ತಂಡಕ್ಕೆ ಆಸರೆಯಾಗಿದ್ದರು.

150 ರನ್ ಗುರಿ ಬೆನ್ನತ್ತಿದ ಭಾರತ 19 ಓವರ್‌ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ಭಾರತದ ಪರ ಜೆಮಿಮಾ ರಾಡ್ರಿಗಸ್ ಔಟಾಗದೆ 53, ರಿಚಾ ಘೋಷ್ ಔಟಾಗದೆ 31, ಶಫಾಲಿ ವರ್ಮಾ 33, ಯಾಸ್ತಿಕಾ ಭಾಟಿಯಾ 17, ಹರ್ಮನ್‌ಪ್ರೀತ್ ಕೌರ್ 16 ರನ್ ಗಳಿಸಿದರು.

ಪಾಕ್ ಪರ ನಶ್ರಾ ಸಂಧು 2, ಸಾದಿಯಾ ಇಕ್ಬಾಲ್ ಒಂದು ವಿಕೆಟ್ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.