ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಹಾಗೂ ಕರ್ನಾಟಕ ಕ್ರಿಕೆಟಿಗ ಅರ್ಜುನ್ ಹೊಯ್ಸಳ ಅವರು ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ವೇದಾ ಅವರಿಗೆ ಪ್ರೇಮನಿವೇದನೆ ಮಾಡುತ್ತಿರುವ ಚಿತ್ರವೊಂದನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವ ಮೂಲಕ ಅರ್ಜುನ್ ಈ ವಿಷಯವನ್ನು ಖಚಿತಪಡಿಸಿದ್ದಾರೆ. 'ಹೌದು, ಅವಳು (ವೇದಾ ಕೃಷ್ಣಮೂರ್ತಿ) ಒಪ್ಪಿಕೊಂಡಿದ್ದಾಳೆ' ಎಂದೂ ಬರೆದುಕೊಂಡಿದ್ದಾರೆ.

ಈ ಚಿತ್ರ ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ನೆಟ್ಟಿಗರು ಶುಭಾಶಯಗಳ ಮಹಾಪೂರವನ್ನೇ ಹರಿಸಿದ್ದಾರೆ.

ಈ ಜೋಡಿಯನಿಶ್ಚಿತಾರ್ಥ ಬೆಂಗಳೂರಿನಲ್ಲಿ ಮುಂದಿನ ವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

29 ವರ್ಷದ ವೇದಾ ತಮ್ಮ 18ನೇ ವಯಸ್ಸಿನಲ್ಲೇಭಾರತ ಪರ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು. ಟೀಂ ಇಂಡಿಯಾ ಪರ 48 ಏಕದಿನ, 76 ಟಿ20 ಪಂದ್ಯಗಳನ್ನಾಡಿರುವ ಅವರು ಕ್ರಮವಾಗಿ 829 ರನ್ ಮತ್ತು 875 ರನ್ ಬಾರಿಸಿದ್ದಾರೆ. ಒಟ್ಟು 10 ಅರ್ಧಶತಕಗಳೂಅವರ ಖಾತೆಯಲ್ಲಿವೆ.

32 ವಯಸ್ಸಿನಅರ್ಜುನ್ಎಡಗೈ ಆರಂಭಿಕ ಬ್ಯಾಟರ್ ಆಗಿದ್ದು, ಕರ್ನಾಟಕ ಪರ 2016ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು. ರಾಜ್ಯದ ಪರ ಹಲವು ಟಿ20 ಟೂರ್ನಿಗಳು, ಕರ್ನಾಟಕ ಪ್ರೀಮಿಯರ್ ಲೀಗ್ನಲ್ಲಿ (ಕೆಪಿಎಲ್) ಆಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.