ಕೊಲಂಬೊ: ಇತ್ತೀಚೆಗೆ ಅಗಲಿದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕವಾಡ್ ಅವರ ನೆನಪಿಗಾಗಿ ಭಾರತೀಯ ಕ್ರಿಕೆಟ್ ತಂಡವು ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ತೋಳಿಗೆ ಕಪ್ಪು ಪಟ್ಟಿ ಧರಿಸಿ ಆಡಲು ನಿರ್ಧರಿಸಿದೆ. ಆ ಮೂಲಕ ಅಗಲಿದ ಚೇತನಕ್ಕೆ ಗೌರವ ಸೂಚಿಸಿದೆ.

ಕ್ಯಾನ್ಸರ್ಗೆ ತುತ್ತಾಗಿದ್ದ ಗಾಯಕ್ವಾಡ್ ಅವರು ಜುಲೈ 31ರಂದು ನಿಧನರಾಗಿದ್ದರು.

ಈ ಕುರಿತು ಪ್ರಕಟಣೆ ಹೊರಡಿಸಿದ ಬಿಸಿಸಿಐ, ‘ಅಂಶುಮಾನ್ ಗಾಯಕ್ವಾಡ್ ಅವರ ನೆನಪಿಗಾಗಿ ಭಾರತ ತಂಡ ಕಪ್ಪು ಪಟ್ಟಿ ಧರಿಸಿ ಮೈದಾನಕ್ಕೆ ಇಳಿಯಲಿದೆ’ ಎಂದು ತಿಳಿಸಿದೆ.

‘ಗಾಯಕ್ವಾಡ್ ಅವರೊಂದಿಗೆ ಹಲವು ಸಂದರ್ಭಗಳಲ್ಲಿ ಮಾತನಾಡುವ ಅವಕಾಶ ಸಿಕಿತ್ತು. ಅವರ ನಿಧನದ ಸುದ್ದಿ ಕೇಳಿ ಆಘಾತವಾಯಿತು. ಬಿಸಿಸಿಐ ಪ್ರಶಸ್ತಿ ಕಾರ್ಯಕ್ರಮದಲ್ಲಿ ಅವರೊಂದಿಗೆ ಮಾತನಾಡಲು ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟವಾಗಿತ್ತು. ರಣಜಿ ಟ್ರೋಪಿ ವೇಳೆ ನನ್ನ ಆಟದ ಬಗ್ಗೆಯೂ ಚರ್ಚೆ ನಡೆಸಿದ್ದೆವು’ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
.ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅಂಶುಮಾನ್ ಗಾಯಕವಾಡ್ ಇನ್ನಿಲ್ಲ.IND vs SL 1st ODI: ಭಾರತ-ಶ್ರೀಲಂಕಾ ಮೊದಲ ಏಕದಿನ ರೋಚಕ 'ಟೈ'.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.