ಸಾಗರ (ಶಿವಮೊಗ್ಗ ಜಿಲ್ಲೆ): ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿ ಆರಂಭವಾಗುತ್ತಿರುವ ಹೊತ್ತಿಗೆ ತನ್ನ ಕಾರನ್ನೇ ಸಿಂಗರಿಸುವ ಮೂಲಕ ಸಾಗರದ ಕ್ರಿಕೆಟ್ ಅಭಿಮಾನಿ ಸಂತೋಷ್ ಸದ್ಗುರು ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಪರವಾಗಿ ಅಭಿಯಾನ ನಡೆಸಲು ಮುಂದಾಗಿದ್ದಾರೆ.

ಫಿಯೆಟ್ ಕಾರಿಗೆ ಬಣ್ಣ ಬಳಿಯುವ ಮೂಲಕ ಅದರ ಮೇಲೆ ಸಂತೋಷ್ ಅವರು ‘ಈ ಸಲ ಕಪ್ ನಮ್ದೆ’ ಎಂಬ ಘೋಷಣೆ ಬರೆಸಿದ್ದಾರೆ. ಅಲ್ಲದೇ ಕನ್ನಡ ಚಿತ್ರರಂಗದ ಖ್ಯಾತ ನಟರಾದ ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಶಂಕರ್‌ನಾಗ್, ಪುನೀತ್ ರಾಜ್‌ಕು ಮಾರ್ ಅವರ ಭಾವಚಿತ್ರಗಳನ್ನೂ ಕಾರಿನ ಮೇಲೆ ಚಿತ್ರಿಸುವ ಮೂಲಕ ಆರ್‌ಸಿಬಿ ತಂಡಕ್ಕೆ ಶುಭ ಕೋರಿದ್ದಾರೆ. ಈ ರೀತಿ ವರ್ಣರಂಜಿತವಾಗಿರುವ ಈ ಕಾರು ನಗರದ ವಿವಿಧೆಡೆ ಸಂಚರಿಸುತ್ತಿದ್ದು, ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.