ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ –2022 (ಐಪಿಎಲ್) ಮೆಗಾ ಹರಾಜು ಪ್ರಕ್ರಿಯೆಯಲ್ಲಿ ವೇಗಿ ಹರ್ಷಲ್ ಪಟೇಲ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ₹10.75 ಕೋಟಿ ನೀಡಿ ಖರೀದಿಸಿದೆ.

ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಆಟಗಾರರ ಹರಾಜು ಪ್ರಕ್ರಿಯೆ ನಡೆಯುತ್ತಿದೆ.

ಹರಾಜಿನಲ್ಲಿ ಹರ್ಷಲ್ ಪಟೇಲ್‌ಗಾಗಿ ಆರ್‌ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಪೈಪೋಟಿ ಏರ್ಪಟಿತ್ತು. ಅಂತಿಮವಾಗಿ ಹರ್ಷಲ್‌ರನ್ನು ಖರೀದಿಸುವಲ್ಲಿ ಆರ್‌ಸಿಬಿ ಯಶಸ್ವಿಯಾಗಿದೆ.

ಓದಿ...Indian Premier League 2022: ಯಾವ ಆಟಗಾರರು ಯಾವ ತಂಡಕ್ಕೆ? ಇಲ್ಲಿದೆ ಪಟ್ಟಿ...

ಕಳೆದ ಆವೃತ್ತಿಯಲ್ಲಿ ಆರ್‌ಸಿಬಿ ಪರ ಆಡಿದ್ದ ಹರ್ಷಲ್, 32 ವಿಕೆಟ್‌ಗಳನ್ನು ಪಡೆದು ಮಿಂಚಿದ್ದರು. ಆಗ ಅವರಿಗೆ ಆರ್‌ಸಿಬಿ ನೀಡಿದ್ದ ಮೊತ್ತ ಕೇವಲ ₹20 ಲಕ್ಷ. ಆದರೆ, ಈ ಬಾರಿ ₹10.75 ಕೋಟಿ ನೀಡಿ ಖರೀದಿಸಿರುವುದು ವಿಶೇಷ.

ಆರ್‌ಸಿಬಿ ಫಾಫ್ ಡು ಪ್ಲೆಸಿ ಅವರನ್ನು ₹7 ಕೋಟಿ ನೀಡಿ ಖರೀದಿಸಿದೆ. ಈ ಮೂಲಕ ತಂಡ ಆಟಗಾರರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ವಿರಾಟ್ ಕೊಹ್ಲಿ, ಮ್ಯಾಕ್ಸ್‌ವೇಲ್, ಮೊಹಮ್ಮದ್ ಸಿರಾಜ್ ಅವರನ್ನು ಆರ್‌ಸಿಬಿ ಉಳಿಸಿಕೊಂಡಿತ್ತು.

ಇದನ್ನೂ ಓದಿ:IPL Auction 2022 LIVE: ಕೆಕೆಆರ್ಗೆ ₹12.25 ಕೋಟಿಗೆ ಶ್ರೇಯಸ್, ಆರ್ಸಿಬಿಗೆ ಡುಪ್ಲೆಸಿ Live

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.