ನವದೆಹಲಿ: ಗಾಯದ ಸಮಸ್ಯೆಯಿಂದಾಗಿ ಆಲ್‌ರೌಂಡರ್ ವಿಜಯ ಶಂಕರ್ ಅವರು ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆ ‘ಎಎನ್‌ಐ’ ಮೂಲಗಳ ಮಾಹಿತಿ ಉಲ್ಲೇಖಿಸಿ ವರದಿ ಮಾಡಿದೆ.

ಅವರ ಸ್ಥಾನಕ್ಕೆಕರ್ನಾಟಕದ ಮಯಾಂಕ್ ಅಗರ್ವಾಲ್ ಅವರಿಗೆ ಅವಕಾಶ ಸಿಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಮಯಾಂಕ್ ಅಗರ್ವಾಲ್ ಅವರು ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧ ನಡೆದಿದ್ದ ಟೆಸ್ಟ್ಆಡುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿಟ್ಟಿದ್ದರು.

ಜಸ್ಪ್ರಿತ್ ಬೂಮ್ರಾ ಅವರ ಎಸೆತ ಎದುರಿಸುವಾಗ ಕಾಲ್ಬೆರಳಿಗೆ ಆಗಿರುವ ಗಾಯದಿಂದಾಗಿ ಅವರು ಆಟವಾಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಅವರು ತವರಿಗೆ ಮರಳುತ್ತಿದ್ದಾರೆ ಎಂದು ಬಿಸಿಸಿಐನ ಅಧಿಕಾರಿಗಳು ತಿಳಿಸಿರುವುದಾಗಿ ‘ದಿ ಹಿಂದೂ’ ಪತ್ರಿಕೆ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.