ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2021ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಪ್ಲೇ-ಆಫ್ ಹಂತದ ರೋಚಕ ಪಂದ್ಯಗಳಿಗೆ ವೇದಿಕೆ ಸಜ್ಜುಗೊಂಡಿದೆ.

ಅಕ್ಟೋಬರ್ 10 ಭಾನುವಾರ ದುಬೈಯಲ್ಲಿ ನಡೆಲಿರುವ ಮೊದಲ ಕ್ವಾಲಿಫೈಯರ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸವಾಲನ್ನು ಎದುರಿಸಲಿದೆ.

ಬಳಿಕ ಅಕ್ಟೋಬರ್ 11 ಸೋಮವಾರ ಶಾರ್ಜಾದಲ್ಲಿ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೋಲ್ಕತ್ತ ನೈಟ್ ರೈಡರ್ಸ್ ತಂಡದ ಸವಾಲನ್ನು ಎದುರಿಸಲಿದೆ.

ಮೊದಲ ಕ್ವಾಲಿಫೈಯರ್‌ನಲ್ಲಿ ಗೆದ್ದ ತಂಡವು ನೇರವಾಗಿ ಫೈನಲ್‌ಗೆ ಪ್ರವೇಶಿಸಲಿದೆ. ಅಲ್ಲಿ ಸೋತ ತಂಡವು ಅಕ್ಟೋಬರ್ 13 ಬುಧವಾರ ಶಾರ್ಜಾದಲ್ಲಿ ನಡೆಯಲಿರುವ ಎರಡನೇ ಕ್ವಾಲಿಫೈಯರ್‌ನಲ್ಲಿ ಎಲಿಮಿನೇಟರ್ ವಿಜೇತ ತಂಡದ ಸವಾಲನ್ನು ಎದುರಿಸಲಿದೆ.

ಫೈನಲ್ ಪಂದ್ಯವು ಅಕ್ಟೋಬರ್ 15 ಶುಕ್ರವಾರದಂದು ದುಬೈಯಲ್ಲಿ ನಿಗದಿಯಾಗಿದೆ.

ಪ್ಲೇ-ಆಫ್ ಪ್ರವೇಶಿಸಿದ ತಂಡಗಳು:
1. ಡೆಲ್ಲಿ ಕ್ಯಾಪಿಟಲ್ಸ್
2. ಚೆನ್ನೈ ಸೂಪರ್ ಕಿಂಗ್ಸ್
3. ರಾಯಲ್ ಚಾಲೆಂಜರ್ಸ್ ಬೆಂಗಳೂರು
4. ಕೋಲ್ಕತ್ತ ನೈಟ್ ರೈಡರ್ಸ್

ಟೂರ್ನಿಯಿಂದ ನಿರ್ಗಮಿಸಿದ ತಂಡಗಳು: ಮುಂಬೈ ಇಂಡಿಯನ್ಸ್, ಪಂಜಾಬ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್, ಸನ್‌ರೈಸರ್ಸ್ ಹೈದರಾಬಾದ್.

ಅಂಕಪಟ್ಟಿ ಇಂತಿದೆ:

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.