ಅಬುಧಾಬಿ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಸೋಮವಾರ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್, ಮೊದಲ ಎಸೆತದಲ್ಲೇ ಔಟ್ ಆಗಿಖಾತೆ ತೆರೆಯಲಾಗದೇ ಪೆವಿಲಿಯನ್‌ಗೆ ಮರಳಿದ್ದಾರೆ.

ಕೋಲ್ಕತ್ತ ನೈಟ್ ರೈಡರ್ಸ್ ತಂಡದ ವೇಗದ ಬೌಲರ್ ವೆಸ್ಟ್‌ಇಂಡೀಸ್‌ನ ಆ್ಯಂಡ್ರೆ ರಸೆಲ್ ಯಾರ್ಕರ್ ದಾಳಿಯಲ್ಲಿ ವಿಲಿಯರ್ಸ್ ಕ್ಲೀನ್ ಬೌಲ್ಡ್ ಆದರು.

ಭಾರತದಲ್ಲಿ ನಡೆದ ಮೊದಲಾರ್ಧದ ಪಂದ್ಯಗಳಲ್ಲಿ ಅಮೋಘ ಪ್ರದರ್ಶನ ನೀಡಿರುವ ಆರ್‌ಸಿಬಿ ಆಟಗಾರರು, ಯುಎಇನಲ್ಲಿ ನಡೆಯುತ್ತಿರುವ ದ್ವಿತೀಯಾರ್ಧದ ಮೊದಲ ಪಂದ್ಯದಲ್ಲೇ ಪರದಾಡಿದರು.

ಕೆಕೆಆರ್ ಬೌಲರ್‌ಗಳ ನಿಖರ ದಾಳಿಯ ಎದುರು ಆರ್‌ಸಿಬಿ ಬ್ಯಾಟ್ಸ್‌ಮನ್‌ಗಳ ಬಳಿ ಉತ್ತರವೇ ಇಲ್ಲ. ಅತ್ತ ಅತಿ ವಿರಳ ಎಂಬಂತೆ ವಿಲಿಯರ್ಸ್ ಖಾತೆ ತೆರೆಯುವಲ್ಲಿ ವಿಫಲರಾದರು.

ನಾಯಕ ವಿರಾಟ್ ಕೊಹ್ಲಿ (5) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ (10) ಸಹ ನಿರಾಸೆ ಮೂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.