ದುಬೈ: ಕೋವಿಡ್‌ನಿಂದಾಗಿ ಅರ್ಧದಲ್ಲೇ ಮೊಟಕುಗೊಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ದ್ವಿತೀಯಾರ್ಧದ ಪಂದ್ಯಗಳು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ (ಯುಎಇ) ನಡೆಯಲಿವೆ.

ಸೆಪ್ಟೆಂಬರ್ 19, ಭಾನುವಾರಆರಂಭಗೊಳ್ಳಲಿರುವಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂಬೈ ಇಂಡಿಯನ್ಸ್ ಸವಾಲನ್ನು ಎದುರಿಸಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಸೋಮವಾರದಂದು ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಅಂತೆಯೇ ಫೈನಲ್ ಪಂದ್ಯವು ಅಕ್ಟೋಬರ್ 15 ಶುಕ್ರವಾರದಂದು ನಿಗದಿಯಾಗಿವೆ.

ಈ ಹಿಂದೆ ಐಪಿಎಲ್ 2021 ಟೂರ್ನಿಯು ಎಪ್ರಿಲ್-ಮೇ ತಿಂಗಳಲ್ಲಿ ನಿಗದಿಯಾಗಿತ್ತು. ಆದರೆ ಜೀವಾ ಸುರಕ್ಷಾ ಬಯೋಬಬಲ್‌ನಲ್ಲಿದ್ದರೂ ಕೆಲವು ಫ್ರಾಂಚೈಸಿಯ ಆಟಗಾರರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದರಿಂದ ಮೇ 4ರಂದು ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು.

ಯುಎಇಗೆ ಸ್ಥಳಾಂತರ
ಕೋವಿಡ್ ಹಿನ್ನೆಲೆಯಲ್ಲಿ ಐಪಿಎಲ್ ಟೂರ್ನಿಯಲ್ಲಿ ಉಳಿದಿರುವ ಪಂದ್ಯಗಳನ್ನು ಯುಎಇಗೆ ಸ್ಥಳಾಂತರ ಮಾಡಲಾಗಿದೆ. ಭಾರತದಲ್ಲಿ ಇದುವರೆಗೆ 29 ಪಂದ್ಯಗಳು ಆಯೋಜನೆಯಾಗಿದ್ದು, ಪ್ಲೇ-ಆಫ್ ಹಾಗೂ ಫೈನಲ್ ಸೇರಿದಂತೆ ಉಳಿದಿರುವ 31 ಪಂದ್ಯಗಳು ಯುಎಇನಲ್ಲಿ ಆಯೋಜನೆಯಾಗಲಿವೆ.

ಆತಿಥ್ಯ ವಹಿಸುವ ತಾಣಗಳು:
1. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ,
2. ಶೇಖ್ ಜಾಯೆದ್ ಸ್ಟೇಡಿಯಂ, ಅಬುದಾಬಿ,
3. ಶಾರ್ಜಾ ಕ್ರಿಕೆಟ್ ಸ್ಟೇಡಿಯಂ.

ಸ್ಟೇಡಿಯಂಗೆ ಎಂಟ್ರಿ ಕೊಡಲಿರುವ ಪ್ರೇಕ್ಷಕರು:
ಇಲ್ಲಿ ಗಮನಾರ್ಹ ಅಂಶವೆಂದರೆ ಐಪಿಎಲ್ ಮೊದಲಾರ್ಧದ ಪಂದ್ಯಗಳು ಮುಚ್ಚಿದ ಕ್ರೀಡಾಂಗಣದಲ್ಲಿ ಆಯೋಜನೆಯಾಗಿದ್ದರೆ ಯುಎಇನಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಪಂದ್ಯವನ್ನು ಕಣ್ಣಾರೆವೀಕ್ಷಿಸಲು ಪ್ರೇಕ್ಷಕರಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ಇದು ಟೂರ್ನಿಯ ರೋಚಕತೆಯನ್ನು ಮತ್ತಷ್ಟು ಇಮ್ಮಡಿಗೊಳಿಸಿದೆ.

ಈ ನಡುವೆ ಕೆಲವು ಪ್ರಾಂಚೈಸಿಗಳು ಪ್ರಮುಖ ಆಟಗಾರರ ಅನುಪಸ್ಥಿತಿಯನ್ನು ಎದುರಿಸುತ್ತಿವೆ.ಆದರೂ ಬದಲಿ ಆಟಗಾರರನ್ನು ಹೆಸರಿಸಿದ್ದು, ಹೊಸ ಹುಮ್ಮಸ್ಸಿನೊಂದಿಗೆ ಕಣಕ್ಕಿಳಿಯಲಿವೆ.

ಅಂಕಪಟ್ಟಿ: ಮೂರನೇ ಸ್ಥಾನದಲ್ಲಿ ಆರ್‌ಸಿಬಿ
ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಬ್ಸ್ ತಂಡಗಳನ್ನು ಹೊರತುಪಡಿಸಿ ಇತರೆಲ್ಲ ಆರು ತಂಡಗಳು ಇದುವರೆಗೆ ತಲಾ ಏಳು ಪಂದ್ಯಗಳನ್ನು ಪೂರ್ಣಗೊಳಿಸಿವೆ. ಡೆಲ್ಲಿ ಹಾಗೂ ಪಂಜಾಬ್ ತಲಾ ಎಂಟು ಪಂದ್ಯಗಳನ್ನು ಆಡಿವೆ.

ಆರು ಗೆಲುವು ಹಾಗೂ ಎರಡು ಸೋಲಿನೊಂದಿಗೆ ಒಟ್ಟು 12 ಅಂಕ ಗಳಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಏಳು ಪಂದ್ಯಗಳಲ್ಲಿ 10 ಅಂಕಗಳನ್ನು ಗಳಿಸಿವೆ. ಅಷ್ಟೇ ಅಂಕಗಳನ್ನುಸಂಪಾದಿಸಿರುವ ಆರ್‌ಸಿಬಿ'ರನ್ ರೇಟ್' ಲೆಕ್ಕಾಚಾರದಲ್ಲಿ ಮೂರನೇ ಸ್ಥಾನದಲ್ಲಿದೆ.

ಅಂಕಪಟ್ಟಿ ಇಂತಿದೆ:

ಸಮಯ: ಭಾರತೀಯ ಕಾಲಮಾನ ಸಂಜೆಯ ಪಂದ್ಯಗಳು 3.30ಕ್ಕೆ ಹಾಗೂ ರಾತ್ರಿಯ ಪಂದ್ಯಗಳು 7.30ಕ್ಕೆ ಸರಿಯಾಗಿ ಆರಂಭವಾಗಲಿವೆ.

ಯುಎಇ ಪಂದ್ಯಗಳ ವೇಳಾಪಟ್ಟಿ ಇಂತಿದೆ:

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.