ಪುಣೆ: ಐಪಿಎಲ್ 2022 ಟೂರ್ನಿಯಲ್ಲಿ ಬುಧವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ತಮ್ಮ ಸಹ ಆಟಗಾರ ವಿರಾಟ್ ಕೊಹ್ಲಿ ಜೊತೆಗಿನ ಹೊಂದಾಣಿಕೆ ಕೊರತೆಯಿಂದಾಗಿ ಗ್ಲೆನ್ ಮ್ಯಾಕ್ಸ್ವೆಲ್ ರನೌಟ್ ಆಗಿದ್ದರು.

ಮೂರು ಎಸೆತಗಳನ್ನು ಎದುರಿಸಿದ್ದ ಮ್ಯಾಕ್ಸ್ವೆಲ್ ಕೇವಲ ಮೂರು ರನ್ ಗಳಿಸಿ ಪೆವಿಲಿಯನ್ಗೆ ಮರಳಿದ್ದರು.

ಇದನ್ನೂ ಓದಿ:ಆರ್ಸಿಬಿ ವಿರುದ್ಧದ ಸೋಲಿಗೆ ಕಾರಣ ಕೊಟ್ಟ ಸಿಎಸ್ಕೆ ನಾಯಕ ಧೋನಿ

ಪಂದ್ಯದ ಬಳಿಕ ಆರ್ಸಿಬಿ ಡ್ರೆಸ್ಸಿಂಗ್ ಕೋಣೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಮ್ಯಾಕ್ಸ್ವೆಲ್, 'ನಾನು ನಿಮ್ಮ ಜೊತೆ ಬ್ಯಾಟಿಂಗ್ ಮಾಡಲು ಸಾಧ್ಯವಿಲ್ಲ' ಎಂದು ವಿರಾಟ್ ಕೊಹ್ಲಿ ಅವರ ಕಾಲೆಳೆದಿದ್ದಾರೆ.

'ವಿಕೆಟ್ ಮಧ್ಯೆ ನೀವು ತುಂಬಾ ವೇಗವಾಗಿ ಓಡುತ್ತೀರಿ. ಒಂದು ಹಾಗೂ ಎರಡು ರನ್ ವೇಗವಾಗಿ ಕದಿಯುತ್ತೀರಿ. ನನಗಿದು ಸಾಧ್ಯವಿಲ್ಲ' ಎಂದು ಹೇಳಿದ್ದಾರೆ.

ಬಳಿಕ ಬೌಲಿಂಗ್ನಲ್ಲಿ ಮೋಡಿ ಮಾಡಿದ್ದ ಮ್ಯಾಕ್ಸ್ವೆಲ್ ಕೇವಲ 22 ರನ್ ನೀಡಿ ಎರಡು ವಿಕೆಟ್ ಕಿತ್ತು ಮಿಂಚಿದರು. ಈ ಮೂಲಕ ಆರ್ಸಿಬಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.