ಮುಂಬೈ: ಐಪಿಎಲ್ 2022ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಸತತ ಐದನೇ ಸೋಲಿಗೆ ಶರಣಾಗಿದೆ. ಆದರೆ ನಾಯಕ ರೋಹಿತ್ ಶರ್ಮಾ ಮಗದೊಂದು ಸಾಧನೆ ಮಾಡಿದ್ದು, ಟ್ವೆಂಟಿ-20 ಕ್ರಿಕೆಟ್ ಮಾದರಿಯಲ್ಲಿ 10,000 ರನ್ ಗಳಿಸಿದ್ದಾರೆ.

ಅಲ್ಲದೆ ವಿರಾಟ್ ಕೊಹ್ಲಿ ಬಳಿಕ ಚುಟುಕು ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಭಾರತದ ಎರಡನೇ ಬ್ಯಾಟರ್ ಎನಿಸಿದ್ದಾರೆ.

ಇದನ್ನೂ ಓದಿ:IPL 2022: ಗಾಯದ ಮೇಲೆ ಬರೆ; ರೋಹಿತ್ ಶರ್ಮಾಗೆ ₹24 ಲಕ್ಷ ದಂಡ

ಒಟ್ಟಾರೆಯಾಗಿ ಟಿ20 ಕ್ರಿಕೆಟ್‌ನಲ್ಲಿ 10,000 ರನ್ ಗಳಿಸಿದ ವಿಶ್ವದ ಏಳನೇ ಬ್ಯಾಟರ್ ಎನಿಸಿದ್ದಾರೆ. ಈ ಮೂಲಕ ಕ್ರಿಸ್ ಗೇಲ್, ಶೋಯೆಬ್ ಮಲಿಕ್, ಕೀರನ್ ಪೊಲಾರ್ಡ್, ಆ್ಯರನ್ ಫಿಂಚ್, ವಿರಾಟ್ ಕೊಹ್ಲಿ ಹಾಗೂ ಡೇವಿಡ್ ವಾರ್ನರ್ ಸಾಲಿಗೆ ಸೇರ್ಪಡೆಗೊಂಡಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ 10,000 ರನ್ ಸರದಾರರ ಪಟ್ಟಿ:
1. ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್): 14,562
2. ಶೋಯೆಬ್ ಮಲಿಕ್ (ಪಾಕಿಸ್ತಾನ): 11,698
3. ಕೀರನ್ ಪೊಲಾರ್ಡ್ (ವೆಸ್ಟ್ ಇಂಡೀಸ್): 11,484
4. ಆ್ಯರನ್ ಫಿಂಚ್ (ಆಸ್ಟ್ರೇಲಿಯಾ): 10,499
5. ವಿರಾಟ್ ಕೊಹ್ಲಿ (ಭಾರತ): 10,379
6. ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ): 10,373
7. ರೋಹಿತ್ ಶರ್ಮಾ (ಭಾರತ): 10,003

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.