ಮುಂಬೈ: ಐಪಿಎಲ್ 2022 ಟೂರ್ನಿಯಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಮೂರು ರನ್ ಅಂತರದ ರೋಚಕ ಗೆಲುವು ದಾಖಲಿಸಿರುವ ಸನ್‌ರೈಸರ್ಸ್ ಹೈದರಾಬಾದ್ ಪ್ಲೇ-ಆಫ್ ಪ್ರವೇಶದ ಕನಸನ್ನು ಜೀವಂತವಾಗಿರಿಸಿದೆ.

ಪಂದ್ಯದ ನಡುವೆ ಎಲ್ಲರ ಗಮನ ಗ್ಯಾಲರಿಯತ್ತ ನೆಟ್ಟಿತ್ತು. ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಹೈದರಾಬಾದ್ ಹಾಗೂ ಮುಂಬೈ ನಡುವಣ ಪಂದ್ಯವನ್ನು ವೀಕ್ಷಿಸಲು ಆಗಮಿಸಿದ್ದರು.

ಪಂದ್ಯದ ವೇಳೆ ಸಾರಾ ಹಾವಭಾವಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಟ್ವೀಟ್ ಮಾಡಿದ್ದಾರೆ.

ನಾಯಕ ರೋಹಿತ್ ಶರ್ಮಾ ಬೌಂಡರಿ, ಸಿಕ್ಸರ್ ಬಾರಿಸಿದಾಗ ಸಾರಾ ಕೈಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದರು. ಆದರೆ ಪಂದ್ಯದ ನಿರ್ಣಾಯಕ ಹಂತದಲ್ಲಿ ಟಿಮ್ ಡೇವಿಡ್ ಔಟ್ ಆದಾಗ ಸಾರಾಗೆ ಆ ಕ್ಷಣವನ್ನು ಅರಗಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಐದು ಬಾರಿಯ ಚಾಂಪಿಯನ್ ಮುಂಬೈ ಟೂರ್ನಿಯಲ್ಲಿ 10ನೇ ಸೋಲಿಗೆ ಶರಣಾಗಿದೆ. ಕೊನೆಯ ಪಂದ್ಯದಲ್ಲಿ ಮೇ 21ರಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸವಾಲನ್ನು ಎದುರಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.