ಮುಂಬೈ: ಐಪಿಎಲ್ 15ನೇ ಆವೃತ್ತಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಳಪೆ ಬ್ಯಾಟಿಂಗ್ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಪ್ರತಿಕ್ರಿಯೆ ನೀಡಿದ್ದಾರೆ.

'ರೋಹಿತ್ ಅಥವಾ ವಿರಾಟ್ ಕಳಪೆ ಬ್ಯಾಟಿಂಗ್ ಲಯದ ಬಗ್ಗೆ ನನಗೆ ಚಿಂತೆಯಿಲ್ಲ. ಅವರು ಶ್ರೇಷ್ಠ ಆಟಗಾರರು. ವಿಶ್ವಕಪ್‌ಗೆ ಇನ್ನೂ ಸಮಯವಿದ್ದು, ಮಹತ್ತರ ಟೂರ್ನಿಗೂ ಮುನ್ನ ಬ್ಯಾಟಿಂಗ್ ಲಯಕ್ಕೆ ಮರಳಲಿದ್ದಾರೆ ಎಂಬ ವಿಶ್ವಾಸ ನನಗಿದೆ' ಎಂದು 'ಮಿಡ್ ಡೇ'ಗೆ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:'ಕ್ವಾಲಿಫೈಯರ್ 1' ಖಚಿತಪಡಿಸಿದ ಗುಜರಾತ್; ಫೈನಲ್ಗೆ ಲಗ್ಗೆಯಿಡಲು ಎರಡು ಅವಕಾಶ

ಐಪಿಎಲ್‌ನಲ್ಲಿ ಕಳಪೆ ನಿರ್ವಹಣೆ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ, 13 ಪಂದ್ಯಗಳಲ್ಲಿ 19.67ರ ಸರಾಸರಿಯಲ್ಲಿ 236 ರನ್ ಗಳಿಸಿದ್ದಾರೆ. ಅಲ್ಲದೆ 113.46ರ ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಇದು ಐಪಿಎಲ್‌ನಲ್ಲಿ ಕಳೆದ 14 ವರ್ಷಗಳಲ್ಲಿ ವಿರಾಟ್ ಅವರಿಂದ ದಾಖಲಾದ ಕೆಟ್ಟ ಪ್ರದರ್ಶನವಾಗಿದೆ.

ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ, 12 ಪಂದ್ಯಗಳಲ್ಲಿ 18.17ರ ಸರಾಸರಿಯಲ್ಲಿ 218 ರನ್ ಗಳಿಸಿದ್ದಾರೆ. 125.29ರ ಸ್ಟ್ರೈಕ್ ರೇಟ್ ಹೊಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.