ಬೆಂಗಳೂರು: ಟ್ವೆಂಟಿ-20 ಕ್ರಿಕೆಟ್‌ನಲ್ಲಿ 100ನೇ ಸಲ 50 ಅಥವಾ ಅದಕ್ಕಿಂತಲೂ ಹೆಚ್ಚು ರನ್ ಗಳಿಸಿದ ಭಾರತದ ಮೊದಲ ಬ್ಯಾಟರ್ ಎಂಬ ಕೀರ್ತಿಗೆ 'ರನ್ ಮೆಷಿನ್' ಖ್ಯಾತಿಯ ವಿರಾಟ್ ಕೊಹ್ಲಿ ಭಾಜನರಾಗಿದ್ದಾರೆ.

378 ಟಿ20 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಅವರು 92 ಅರ್ಧಶತಕ ಹಾಗೂ ಎಂಟು ಶತಕಗಳನ್ನು ಗಳಿಸಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮಂಗಳವಾರ ನಡೆದ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದಾರೆ.

ಒಟ್ಟಾರೆಯಾಗಿ ಟ್ವೆಂಟಿ-20 ಕ್ರಿಕೆಟ್‌ನಲ್ಲಿ 100ನೇ ಬಾರಿ 50 ಅಥವಾ ಅದಕ್ಕಿಂತಲೂ ಹೆಚ್ಚು ರನ್ ಗಳಿಸಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು 50 ಪ್ಲಸ್ ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ, ವೆಸ್ಟ್‌ಇಂಡೀಸ್‌ನ ದಿಗ್ಗಜ ಕ್ರಿಸ್ ಗೇಲ್ (22 ಶತಕ ಸೇರಿದಂತೆ 110 ಸಲ 50 ಪ್ಲಸ್ ರನ್) ಅಗ್ರಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಎರಡನೇ ಸ್ಥಾನದಲ್ಲಿದ್ದಾರೆ (8 ಶತಕ ಸೇರಿದಂತೆ 109 ಸಲ 50 ಪ್ಲಸ್ ರನ್).

ಟಿ20 ಕ್ರಿಕೆಟ್‌ನಲ್ಲಿ 41.26ರ ಸರಾಸರಿಯಲ್ಲಿ ಒಟ್ಟು 12,092 ರನ್ ಗಳಿಸಿರುವ ವಿರಾಟ್, ಭಾರತದ ಪರ ಚುಟುಕು ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಆಗಿದ್ದಾರೆ.

ಆರ್‌ಸಿಬಿಗೆ ಮೊದಲು ಗೆಲುವು...

ಐಪಿಎಲ್ 2024ನೇ ಸಾಲಿನ ಟೂರ್ನಿಯಲ್ಲಿ ಆರ್‌ಸಿಬಿ ಮೊದಲ ಗೆಲುವು ದಾಖಲಿಸಿದೆ. ವಿರಾಟ್ ಕೊಹ್ಲಿ ಅರ್ಧಶತಕದ ನೆರವಿನಿಂದ ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ನಾಲ್ಕು ವಿಕೆಟ್ ಅಂತರದ ಗೆಲುವು ದಾಖಲಿಸಿತು. ಕೊಹ್ಲಿ 49 ಎಸೆತಗಳಲ್ಲಿ 77 ರನ್ (11 ಬೌಂಡರಿ, 2 ಸಿಕ್ಸರ್) ಗಳಿಸಿ ಆರ್‌ಸಿಬಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.

ಈ ಮೊದಲು ಚೆನ್ನೈಯಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ಪರಾಭವಗೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.