ಚೆನ್ನೈ: ದಕ್ಷಿಣ ಆಫ್ರಿಕಾದ ಆಲ್ರೌಂಡರ್ ಕ್ರಿಸ್ ಮೊರಿಸ್ ಮತ್ತು ಕನ್ನಡಿಗ ಕೃಷ್ಣಪ್ಪ ಗೌತಮ್ ಅವರಿಗೆ ಗುರುವಾರ ಇಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯ ಆಟಗಾರರ ಹರಾಜಿನಲ್ಲಿ ಶುಕ್ರದೆಸೆ ಒಲಿಯಿತು.

ರಾಜಸ್ಥಾನ್ ರಾಯಲ್ಸ್ ತಂಡವು ₹ 16.25 ಕೋಟಿ ನೀಡಿ ಬಲಗೈ ಆಟಗಾರ ಕ್ರಿಸ್ ಅವರನ್ನು ಸೆಳೆದುಕೊಂಡಿತು. ಅವರ ಮೂಲಬೆಲೆ ₹ 75 ಲಕ್ಷ ನಿಗದಿ ಮಾಡಲಾಗಿತ್ತು. ಟೂರ್ನಿಯ ಇತಿಹಾಸದಲ್ಲಿಯೇ ಅತಿ ಹೆಚ್ಚು ಮೌಲ್ಯಕ್ಕೆ ಹರಾಜಾದ ಆಟಗಾರನೆಂಬ ಹೆಗ್ಗಳಿಕೆ ಅವರದ್ದಾಯಿತು. ಈ ಹಿಂದೆ ಯುವರಾಜ್ ಸಿಂಗ್ (₹ 16 ಕೋಟಿ) ಮಾಡಿದ್ದ ದಾಖಲೆಯನ್ನು 30 ವರ್ಷದ ಕ್ರಿಸ್ ಮೀರಿದರು.

ಕರ್ನಾಟಕದ ಆಲ್ರೌಂಡರ್ ಕೃಷ್ಣಪ್ಪ ಗೌತಮ್ ಅವರಿಗೂ ಅದೃಷ್ಟ ಒಲಿಯಿತು. ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅವರನ್ನು ₹ 9.25 ಕೋಟಿಗೆ ಖರೀದಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.