ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಐಸಿಸಿ ಅಧ್ಯಕ್ಷನಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವಿರೋಧ ಆಯ್ಕೆ

ಅಂತರರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ಐಸಿಸಿ) ಅಧ್ಯಕ್ಷರಾಗಿ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Published : 27 ಆಗಸ್ಟ್ 2024, 15:48 IST
Last Updated : 27 ಆಗಸ್ಟ್ 2024, 15:48 IST
ಫಾಲೋ ಮಾಡಿ
Comments

ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ಐಸಿಸಿ) ಅಧ್ಯಕ್ಷರಾಗಿ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಂಗಳವಾರ ಐಸಿಸಿ ಈ ವಿಷಯ ಖಚಿತಪಡಿಸಿದೆ. ಐಸಿಸಿ ಅಧ್ಯಕ್ಷರಾಗಿ ನನ್ನನ್ನು ಆಯ್ಕೆ ಮಾಡಿದ್ದಕ್ಕೆ ಮಂಡಳಿಗೆ ನಾನು ಆಭಾರಿಯಾಗಿದ್ದೇನೆ ಎಂದು ಜಯ್ ಶಾ ತಿಳಿಸಿದ್ದಾರೆ.

ಪ್ರಸ್ತುತ ಅಧ್ಯಕಷ ಗ್ರೆಗ್‌ ಬರ್ಕ್ಲೆ ಅವರ ಅಧಿಕಾರಾವಧಿ ನವೆಂಬರ್‌ 30ರಂದು ಕೊನೆಗೊಳ್ಳಲಿದೆ. ನೂತನ ಅಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಲು ಆಗಸ್ಟ್ 27 ಕೊನೆಯ ದಿನವಾಗಿತ್ತು. ಆದರೆ ಶಾ ಹೊರತುಪಡಿಸಿ ಯಾರೊಬ್ಬರು ನಾಮಪತ್ರ ಸಲ್ಲಿಸಲಿಲ್ಲ. ಡಿಸೆಂಬರ್ 1ರಿಂದ ಶಾ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಐಸಿಸಿ ಅಧ್ಯಕ್ಷರು ತಲಾ ಎರಡು ವರ್ಷಗಳ ಮೂರು ಅವಧಿಗೆ ಆಯ್ಕೆಯಾಗಬಹುದು. ಆದರೆ, ನ್ಯೂಜಿಲೆಂಡ್ ಮೂಲದ ಗ್ರೆಗ್‌ ಈಗಾಗಲೇ ನಾಲ್ಕು ವರ್ಷಗಳನ್ನು ಪೂರೈಸಿದ್ದಾರೆ.

2020ರ ನವೆಂಬರ್‌ನಲ್ಲಿ ಗ್ರೆಗ್‌ ಅವರು ಐಸಿಸಿ ಸಾರಥ್ಯ ಪಡೆದಿದ್ದರು. 2022ರಲ್ಲಿ ಮರು ಆಯ್ಕೆಯಾ ಗಿದ್ದರು. ಆದರೆ, ಮೂರನೇ ಅವಧಿಗೆ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಐಸಿಸಿ ಮಂಡಳಿಗೆ ತಿಳಿಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT