ಶನಿವಾರ, 29 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಶ್ರೀಲಂಕಾದ ಕನ್ಸಲ್ಟೆಂಟ್ ಕೋಚ್ ಹುದ್ದೆಗೆ ಜಯವರ್ಧನೆ ರಾಜೀನಾಮೆ

Published 26 ಜೂನ್ 2024, 16:58 IST
Last Updated 26 ಜೂನ್ 2024, 16:58 IST
ಅಕ್ಷರ ಗಾತ್ರ

ಕೊಲಂಬೊ: ಶ್ರೀಲಂಕಾ ಕ್ರಿಕೆಟ್ ತಂಡದ ಸಲಹೆಗಾರ ತರಬೇತುದಾರ ಹುದ್ದೆಯಿಂದ ಮಾಜಿ ನಾಯಕ ಮಹೇಲ ಜಯವರ್ಧನೆ ಕೆಳಗಿಳಿದಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ(ಎಸ್‌ಎಲ್‌ಸಿ).ತಿಳಿಸಿದೆ.

ಸದ್ಯ ನಡೆಯುತ್ತಿರುವ ಟಿ–20 ವಿಶ್ವಕಪ್ ಟೂರ್ನಿಯಿಂದ ಶ್ರೀಲಂಕಾ ಲೀಗ್ ಹಂತದಲ್ಲೇ ಹೊರಬಿದ್ದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಆಗಿದೆ.

‘ಜಯವರ್ಧನೆ ಅವರು ತಮ್ಮ ಅಧಿಕಾರಾವಧಿಯಲ್ಲಿ ರಾಷ್ಟ್ರೀಯ ತಂಡದಲ್ಲಿ ಅತ್ಯಂತ ಪ್ರಮುಖ ಬದಲಾವಣೆಗೆ ನೆರವಾಗಿದ್ದಾರೆ’ಎಂದು ಕ್ರಿಕೆಟ್ ಮಂಡಳಿ ತಿಳಿಸಿದೆ. ಇದೇವೇಳೆ, ಮಹೇಲ ಅವರ ಭವಿಷ್ಯದ ಎಲ್ಲ ಪ್ರಯತ್ನಗಳಲ್ಲಿ ಯಶಸ್ಸು ಸಿಗಲೆಂದು ಹಾರೈಸಲು ಮಂಡಳಿ ಬಯಸುತ್ತದೆ. ಅವರ ಅಧಿಕಾರಾವಧಿಯಲ್ಲಿ ಅವರು ಸಲ್ಲಿಸಿದ ಸೇವೆಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.

47 ವರ್ಷದ ಮಮಹೇಲಾ ಜಯವರ್ಧನೆ 2022ರಲ್ಲಿ ಕನ್ಸಲ್ಟೆಂಟ್ ಕೋಚ್ ಆಗಿ ನೇಮಕವಾಗಿದ್ದರು. ಬಳಿಕ, ಅವರ ಅಧಿಕಾರಾವಧಿಯನ್ನು ವಿಸ್ತರಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT