ನವದೆಹಲಿ:ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ)ಕ್ರಿಕೆಟ್ ಆಯ್ಕೆ ಸಮಿತಿಗೆಕಪಿಲ್ ದೇವ್ ರಾಜೀನಾಮೆ ನೀಡಿದ್ದಾರೆ.

ಕಪಿಲ್ ದೇವ್ ನೇತೃತ್ವದ ಕ್ರಿಕೆಟ್ ಆಯ್ಕೆ ಸಮಿತಿಭಾರತ ತಂಡದ ಕೋಚ್ ಆಯ್ಕೆ ಮಾಡಿತ್ತು. ಈ ಆಯ್ಕೆ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಆಯ್ಕೆ ಸಮಿತಿಯಲ್ಲಿದ್ದ ಕಪಿಲ್ ದೇವ್, ಅನ್ಷುಮನ್ ಗಾಯಕವಾಡ್ ಮತ್ತು ಶಾಂತಾ ರಂಗಸ್ವಾಮಿ ವಿರುದ್ಧ ಬಿಸಿಸಿಐಗೆ ದೂರ ನೀಡಲಾಗಿತ್ತು.

ಈ ದೂರಿನ ಅನ್ವಯ ಬಿಸಿಸಿಐನ ನೀತಿ ಅಧಿಕಾರಿ ಡಿ.ಕೆ. ಜೈನ್ ಅವರು ಕಪಿಲ್ ದೇವ್ ಸೇರಿದಂತೆ ಮೂವರಿಗೆ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿಕಪಿಲ್ ದೇವ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಆಜೀವ ಸದಸ್ಯ ಸಂಜೀವ್ ಗುಪ್ತಾ ಅವರು ದೂರು ನೀಡಿದ್ದರು.

‘ಕಪಿಲ್ ದೇವ್ ಅವರು ಕ್ರಿಕೆಟ್ ವೀಕ್ಷಕ ವಿವರಣೆಗಾರರಾಗಿದ್ದಾರೆ. ಫ್ಲಡ್ಲೈಟ್ ಕಂಪನಿಯ ಮಾಲೀಕ ಮತ್ತು ಭಾರತೀಯ ಕ್ರಿಕೆಟಿಗರ ಸಂಸ್ಥೆಯ ಸದಸ್ಯರಾಗಿದ್ದಾರೆ. ಅನ್ಷುಮನ್ ಅವರು ಸ್ವಂತ ತರಬೇತಿ ಅಕಾಡೆಮಿ ಹೊಂದಿದ್ದಾರೆ. ಬಿಸಿಸಿಐ ಮಾನ್ಯತಾ ಸಮಿತಿಯ ಸದಸ್ಯರಾಗಿದ್ದಾರೆ. ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಶಾಂತಾ ಅವರು ಐಸಿಎನಲ್ಲಿದ್ದಾರೆ’ ಎಂದು ಗುಪ್ತಾ ದೂರಿದ್ದಾರೆ.

ಈಚೆಗೆ ಭಾರತ ತಂಡಕ್ಕೆ ರವಿಶಾಸ್ತ್ರಿ ಅವರನ್ನು ಮುಖ್ಯ ಕೋಚ್ ಆಗಿ ಕಪಿಲ್ ದೇವ್ ನೇತೃತ್ವದ ಸಮಿತಿಯು ಆಯ್ಕೆ ಮಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.