ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಪಾಕಿಸ್ತಾನ ತಂಡವು ಸೋತ ಬೆನ್ನಲ್ಲೇ 'ಕರ್ಮ ರಿಟರ್ನ್ಸ್' ಹ್ಯಾಶ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿತ್ತು.

ಇದಕ್ಕೆ ಪ್ರಮುಖ ಕಾರಣ ಪಾಕಿಸ್ತಾನದ ವೇಗದ ಬೌಲರ್ ಶಾಹೀನ್ ಅಫ್ರಿದಿ ತೋರಿರುವ ಉದ್ಧಟತನವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ನಿಖರ ದಾಳಿ ಸಂಘಟಿಸಿದ್ದ ಶಾಹೀನ್, ರೋಹಿತ್ ಶರ್ಮಾ, ಕೆ.ಎಲ್. ರಾಹುಲ್ ಹಾಗೂ ವಿರಾಟ್ ಕೊಹ್ಲಿ ವಿಕೆಟ್‌ಗಳನ್ನು ಕಬಳಿಸಿ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.

ಇದನ್ನೂ ಓದಿ:T20 WC: ಕ್ಯಾಚ್ ಕೈಬಿಟ್ಟ ಹಸನ್ ಅಲಿ; ವಿಶ್ವಕಪ್ ಕೈಚೆಲ್ಲಿದ ಪಾಕಿಸ್ತಾನ

ಅಲ್ಲಿಗೆ ಶಾಹೀನ್ ಆಫ್ರಿದಿ ಸಂಭ್ರಮ ಆಚರಣೆಯು ಮುಗಿಯಲಿಲ್ಲ. ಬಳಿಕ ಬೌಂಡರಿ ಗೆರೆ ಬಳಿ ಫೀಲ್ಡಿಂಗ್ ಮಾಡುತ್ತಿದ್ದ ವೇಳೆಯಲ್ಲಿ ಭಾರತೀಯ ಆಟಗಾರರನ್ನು ವಿಕೆಟ್ ಪಡೆದಿದ್ದ ರೀತಿಯನ್ನು ಅಣಕಿಸಿದ್ದರು.

ಇದು ಭಾರತೀಯ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಈಗ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಶಾಹೀನ್ ಅಫ್ರಿದಿ ದಾಳಿಯಲ್ಲೇ ಮ್ಯಾಥ್ಯೂ ವೇಡ್ ಹ್ಯಾಟ್ರಿಕ್ ಸಿಕ್ಸರ್ ಸೇರಿದಂತೆ 22 ರನ್ ಚಚ್ಚುವ ಮೂಲಕ ಆಸೀಸ್‌ಗೆ ರೋಚಕ ಗೆಲುವು ಒದಗಿಸಿಕೊಟ್ಟಿದ್ದರು.

ಇದನ್ನೇ ಬೊಟ್ಟು ಮಾಡಿರುವ ಕ್ರಿಕೆಟ್ ಅಭಿಮಾನಿಗಳು ಟ್ವಿಟರ್‌ನಲ್ಲಿ ಶಾಹೀನ್ ಅಫ್ರಿದಿ ಅವರನ್ನು 'ಕರ್ಮಫಲ' ಎಂದು ಟ್ರೋಲ್‌ಗೆ ಗುರಿಯಾಗಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.