ಮುಂಬೈ: ಸತತ ಎರಡು ಪಂದ್ಯಗಳಲ್ಲಿ ಸೋತಿರುವ ಕೋಲ್ಕತ್ತ ನೈಟ್ ರೈಡರ್ಸ್ ಮತ್ತು ಸೋಲು–ಗೆಲುವಿನ ಮಿಶ್ರ ಫಲ ಕಂಡಿರುವ ರಾಜಸ್ಥಾನ ರಾಯಲ್ಸ್ ತಂಡಗಳು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯಲ್ಲಿ ಸೋಮವಾರ ಮುಖಾಮುಖಿಯಾಗಲಿವೆ.

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ರೈಸರ್ಸ್ ತಂಡಗಳ ವಿರುದ್ಧ ಕೋಲ್ಕತ್ತ ಹಿಂದಿನ ಎರಡು ಪಂದ್ಯಗಳಲ್ಲಿ ಕ್ರಮವಾಗಿ 44 ರನ್ ಮತ್ತು 7 ವಿಕೆಟ್ಗಳಿಂದ ಸೋತಿದೆ. ಈ ವರೆಗೆ ಆಡಿರುವ ಪಂದ್ಯಗಳಲ್ಲಿ ಪೈಕಿ ಮೂರರಲ್ಲಿ ಗೆದ್ದಿದ್ದು ಮೂರರಲ್ಲಿ ಸೋತಿದೆ. ರಾಯಲ್ಸ್ ಐದು ಪಂದ್ಯಗಳಲ್ಲಿ ಮೂರನ್ನು ಗೆದ್ದುಕೊಂಡಿದೆ.

ಕೋಲ್ಕತ್ತದ ಬ್ಯಾಟರ್ಗಳ ಪೈಕಿ ಆ್ಯಂಡ್ರೆ ರಸೆಲ್ ಅವರನ್ನು ಹೊರತುಪಡಿಸಿದರೆ ಉಳಿದ ಯಾರಿಗೂ ಸ್ಥಿರ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಬೌಲಿಂಗ್ ವಿಭಾಗದಲ್ಲಿ ಸ್ಪಿನ್ನರ್ ವರುಣ್ ಚಕ್ರವರ್ತಿ ಮತ್ತು ಮಧ್ಯಮ ವೇಗಿಗಳಾದ ಉಮೇಶ್ ಯಾದವ್ ಮತ್ತು ಪ್ಯಾಟ್ ಕಮಿನ್ಸ್ ಅವರಿಗೆ ಸಂಪೂರ್ಣವಾಗಿ ಸಾಮರ್ಥ್ಯ ಹೊರಗೆಡವಲು ಸಾಧ್ಯವಾಗಲಿಲ್ಲ. ನಾಯಕ ಶ್ರೇಯಸ್ ಅಯ್ಯರ್ ಫಾರ್ಮ್ನಲ್ಲಿಲ್ಲ ಎಂಬುದು ತಂಡದ ಚಿಂತೆಯನ್ನು ಹೆಚ್ಚಿಸಿದೆ. ನಿತೇಶ್ ರಾಣಾ, ವೆಂಕಟೇಶ್ ಅಯ್ಯರ್ ಮತ್ತು ಸ್ಯಾಮ್ ಬಿಲಿಂಗ್ಸ್ ಅವರಿಗೂ ನಿರೀಕ್ಷೆಗೆ ತಕ್ಕಂತೆ ಆಡಲು ಆಗಲಿಲ್ಲ.

ರಾಜಸ್ಥಾನ ರಾಯಲ್ಸ್ನ ಜೋಸ್ ಬಟ್ಲರ್ ಮತ್ತು ಯಜುವೇಂದ್ರ ಚಾಹಲ್ ಕ್ರಮವಾಗಿ ಬ್ಯಾಟಿಂಗ್ ಮತ್ತು ಬೌಲಿಂಗ್ನಲ್ಲಿ ಉತ್ತಮ ಸಾಧನೆ ಮಾಡಿದವರ ಪಟ್ಟಿಯ ಅಗ್ರಸ್ಥಾನದಲ್ಲಿದ್ದಾರೆ. ಚಾಹಲ್6.80 ಇಕಾನಮಿಯೊಂದಿಗೆ ಉತ್ತಮ ಫಾರ್ಮ್ನಲ್ಲಿದ್ದಾರೆ. ಅವರನ್ನು ಕೋಲ್ಕತ್ತ ಬ್ಯಾಟರ್ಗಳು ಹೇಗೆ ಎದುರಿಸುವರು ಎಂಬುದು ಕುತೂಹಲ ಕೆರಳಿಸಿದೆ. ರವಿಚಂದ್ರನ್ ಅಶ್ವಿನ್ ಫಾರ್ಮ್ನಲ್ಲಿಲ್ಲದೆ ಇರುವುದು ತಂಡದ ಚಿಂತೆಗೆ ಕಾರಣವಾಗಿದೆ. ಈವರೆಗೆ ಅವರ ಖಾತೆಗೆ ಒಂದು ವಿಕೆಟ್ ಮಾತ್ರ ಸೇರಿದೆ. ನಾಯಕ ಸಂಜು ಸ್ಯಾಮ್ಸನ್ ಮತ್ತು ಕರ್ನಾಟಕದ ದೇವದತ್ತ ಪಡಿಕ್ಕಲ್ ಅವರ ಮೇಲೆ ತಂಡ ನಿರೀಕ್ಷೆ ಇರಿಸಿಕೊಂಡಿದೆ.

ಪಂದ್ಯ ಅರಂಭ: ರಾತ್ರಿ 7.30

ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್

ನಾಯಕರ ಬಲಾಬಲ

ಆಟಗಾರ;ತಂಡ;ಪಂದ್ಯ;ರನ್;ಗರಿಷ್ಠ;ಬೌಂಡರಿ;ಸಿಕ್ಸರ್

ಸಂಜು ಸ್ಯಾಮ್ಸನ್;ರಾಜಸ್ಥಾನ;5;117;55;6;10

ಶ್ರೇಯಸ್ ಅಯ್ಯರ್;ಕೋಲ್ಕತ್ತ;6;151;54;18;2

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.