ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯಲ್ಲಿ ಶುಕ್ರವಾರ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ವೇಗದ ಬೌಲರ್ ಟಿಮ್ ಸೌಥಿ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಗಮನ ಸೆಳೆದಿದ್ದಾರೆ.

ಇದೀಗ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕ್ರೀಡಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಟಾಸ್ ಗೆದ್ದ ಕೋಲ್ಕತ್ತ, ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಆದರಂತೆ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 18.2 ಓವರ್ಗಳಲ್ಲಿ 137 ರನ್ ಗಳಿಸಿ ಆಲೌಟ್ ಆಗಿತ್ತು.

ಪಂಜಾಬ್ ಆರಂಭ ಉತ್ತಮವಾಗಿರಲಿಲ್ಲ. ನಾಯಕ ಮಯಂಕ್ ಅಗರವಾಲ್ ಕೇವಲ 1 ರನ್ ಗಳಿಸಿ ನಿರಾಸೆ ಮೂಡಿಸಿದರು. ಭಾನುಕಾ ರಾಜಪಕ್ಸ (31 ರನ್, 9 ಎಸೆತ), ಶಿಖರ್ ಧವನ್ (16), ಲಿಯಾಮ್ ಲಿವಿಂಗ್ಸ್ಟೋನ್ (19) ಹಾಗೂ ರಾಜ್ ಬಾವಾ (11), ಕಗಿಸೊ ರಬಾಡ (25) ಉತ್ತಮ ಆರಂಭ ಪಡೆದರೂ ಅದರ ಸಂಪೂರ್ಣ ಪ್ರಯೋಜನ ಗಿಟ್ಟಿಸಲು ಸಾಧ್ಯವಾಗಲಿಲ್ಲ.

ಆ್ಯಂಡ್ರೆ ರಸೆಲ್ ಎಸೆದ 18ನೇ ಓವರ್ನಲ್ಲಿ ರಬಾಡ ಸಿಕ್ಸರ್ ಸಿಡಿಸಲು ಯತ್ನಿಸಿದರು. ಆದರೆ, ಟೀಮ್ ಸೌಥಿ ಅಮೋಘವಾಗಿ ಹಿಡಿದ ಕ್ಯಾಚ್ಗೆ ವಿಕೆಟ್ ಒಪ್ಪಿಸಿದ್ದರು.

138 ರನ್ ಗುರಿ ಬೆನ್ನತ್ತಿದ್ದ ಕೆಕೆಆರ್ 14.3 ಓವರ್ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.

ಆ್ಯಂಡ್ರೆ ರಸೆಲ್ ಬಿರುಸಿನ ಅರ್ಧಶತಕ (70*) ಹಾಗೂ ಉಮೇಶ್ ಯಾದವ್ (23ಕ್ಕೆ 4 ವಿಕೆಟ್) ನಿಖರ ದಾಳಿಯ ನೆರವಿನಿಂದ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಶುಕ್ರವಾರ ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಆರು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿತು.

ಈ ಮೂಲಕ ಕೆಕೆಆರ್ ಆಡಿದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಗೆಲುವು ದಾಖಲಿಸಿದೆ.

ಓದಿ... ಭಾರತ ವಿಶ್ವಕಪ್ ಗೆದ್ದು ಇಂದಿಗೆ 11 ವರ್ಷ: ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ

ಓದಿ...ಗುಡಿ ಪಾಡ್ವಾ ಸಂಭ್ರಮ: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ನಟಿ ಶ್ರದ್ಧಾ ಕಪೂರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.