ನವದೆಹಲಿ: ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (ಎನ್ಸಿಎ) ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಅವರು ಮುಂದಿನ ತಿಂಗಳು ಐರ್ಲೆಂಡ್ ಪ್ರವಾಸ ಕೈಗೊಳ್ಳುವ ಭಾರತ ತಂಡಕ್ಕೆ ತರಬೇತಿ ನೀಡಲಿದ್ದಾರೆ.

ಜೂನ್ 26 ಮತ್ತು 28ರಂದು ಐರ್ಲೆಂಡ್ ವಿರುದ್ಧ ಭಾರತ ಟ್ವೆಂಟಿ20 ಪಂದ್ಯಗಳನ್ನು ಆಡಲಿದೆ. ಇದೇ ಸಂದರ್ಭದಲ್ಲಿ ಭಾರತ ಟೆಸ್ಟ್ ತಂಡ ಇಂಗ್ಲೆಂಡ್ನಲ್ಲಿ ನಡೆಯಲಿರುವ ಪಂದ್ಯಕ್ಕೆ ಸಜ್ಜಾಗುತ್ತಿರುತ್ತದೆ. ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಆ ತಂಡದ ಜೊತೆ ಇರುವುದರಿಂದ ಐರ್ಲೆಂಡ್ಗೆ ತೆರಳುವ ತಂಡದೊಂದಿಗೆ ಲಕ್ಷ್ಮಣ್ ಅವರನ್ನು ಕಳುಹಿಸಲಾಗುವುದು.

ಇಂಗ್ಲೆಂಡ್ ಮತ್ತು ಭಾರತ ನಡುವಿನ ಏಕೈಕ ಟೆಸ್ಟ್ ಪಂದ್ಯ ಜುಲೈ ಒಂದರಂದು ಆರಂಭವಾಗಲಿದೆ. ಇದಕ್ಕೂ ಮೊದಲು ಕೌಂಟಿ ತಂಡದ ಎದುರು ನಾಲ್ಕು ದಿನಗಳ ಅಭ್ಯಾಸ ಪಂದ್ಯ ನಡೆಯಲಿದೆ. ಈ ಪಂದ್ಯ ಜೂನ್ 24ರಂದು ಆರಂಭವಾಗಲಿದೆ.

‘ರಾಹುಲ್ ದ್ರಾವಿಡ್ ಟೆಸ್ಟ್ ತಂಡದ ಜೊತೆ ಇಂಗ್ಲೆಂಡ್ನಲ್ಲಿರುವುದರಿಂದ ಐರ್ಲೆಂಡ್ ಪ್ರವಾಸಕ್ಕೆ ತೆರಳುವ ತಂಡಕ್ಕೆ ಲಕ್ಷ್ಮಣ್ ಅವರು ಕೋಚಿಂಗ್ ಮಾಡುವುದು ಬಹುತೇಕ ಖಚಿತವಾಗಿದೆ’ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಿಳಿಸಿದೆ.

ಕಳೆದ ಬಾರಿ ರವಿಶಾಸ್ತ್ರಿ ಮುಖ್ಯ ಕೋಚ್ ಆಗಿದ್ದಾಗ ಎನ್ಸಿಎ ಮುಖ್ಯಸ್ಥರಾಗಿದ್ದ ರಾಹುಲ್ ದ್ರಾವಿಡ್ ಅವರನ್ನು ಶ್ರೀಲಂಕಾ ಪ್ರವಾಸಕ್ಕೆ ತೆರಳಿದ ತಂಡದೊಂದಿಗೆ ಕಳುಹಿಸಲಾಗಿತ್ತು. ರವಿಶಾಸ್ತ್ರಿ ಅವರು ಟೆಸ್ಟ್ ತಂಡದೊಂದಿಗೆ ಇಂಗ್ಲೆಂಡ್ನಲ್ಲಿದ್ದರು. ಶ್ರೀಲಂಕಾದಲ್ಲಿ ತಂಡ ನಿಗದಿತ ಓವರ್ಗಳ ಪಂದ್ಯಗಳನ್ನು ಆಡಿತ್ತು.

ಐಪಿಎಲ್ ಫೈನಲ್ ಪಂದ್ಯ ಮುಗಿದು ಒಂದು ವಾರದ ನಂತರ ದಕ್ಷಿಣ ಆಫ್ರಿಕಾ ತಂಡ ಭಾರತ ಪ್ರವಾಸ ಕೈಗೊಳ್ಳಲಿದ್ದು ಜೂನ್ 9ರಿಂದ ಐದು ಟ್ವೆಂಟಿ20 ಪಂದ್ಯಗಳನ್ನು ಆಡಲಿದೆ. ಈ ಸರಣಿಗಾಗಿ ತಂಡವನ್ನು ಇದೇ 22ರಂದು ಆಯ್ಕೆ ಮಾಡಲಾಗುವುದು. ಎಲ್ಲ ಮಾದರಿಗಳಲ್ಲೂ ಆಡುವ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಜಸ್ಪ್ರೀತ್ ಬೂಮ್ರಾ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.