ದುಬೈ: ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳಿರುವುದು ಮತ್ತು ವೇಗಿ ಜಸ್‌ಪ್ರೀತ್ ಬೂಮ್ರಾ ಗಾಯದಿಂದ ಚೇತರಿಸಿಕೊಂಡಿರುವುದುಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ತಂಡ ಪ್ರಶಸ್ತಿ ಜಯಿಸಲು ನೆರವಾಗಲಿದೆ ಎಂದುಶ್ರೀಲಂಕಾ ದಿಗ್ಗಜ ಕ್ರಿಕೆಟಿಗ ಮಹೇಲ ಜಯವರ್ಧನೆ ಅಭಿಪ್ರಾಯಪಟ್ಟಿದ್ದಾರೆ.

ಕಳೆದ ಮೂರು ವರ್ಷಗಳಿಂದ ಶತಕ ಗಳಿಸಲು ಪರದಾಡುತ್ತಿದ್ದ ವಿರಾಟ್ ಕೊಹ್ಲಿ ಇತ್ತೀಚೆಗೆ ಮುಕ್ತಾಯವಾದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಅಫ್ಗಾನಿಸ್ತಾನ ವಿರುದ್ಧ ಅಜೇಯ 122 ರನ್ ಬಾರಿಸಿ ಮಿಂಚಿದ್ದರು. ಇದರೊಂದಿಗೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 71ನೇ ಶತಕ ಸಿಡಿಸಿದ ಸಾಧನೆ ಮಾಡಿದ್ದರು.

ಏಷ್ಯಾ ಕಪ್ ಟೂರ್ನಿಯಲ್ಲಿ ಆಡಿದ 5 ಇನಿಂಗ್ಸ್‌ಗಳಲ್ಲಿ92ರ ಸರಾಸರಿಯಲ್ಲಿ276 ರನ್ ಕಲೆಹಾಕಿದ್ದರು. ಅದರಲ್ಲಿ ಒಂದು ಶತಕ, ಎರಡು ಅರ್ಧಶತಕಗಳೂ ಸೇರಿವೆ.

ಇದನ್ನೂ ಓದಿ:ಟ್ವಿಟರ್ನಲ್ಲಿ 5 ಕೋಟಿಫಾಲೋವರ್ಸ್ ಹೊಂದಿರುವ ಏಕೈಕ ಕ್ರಿಕೆಟಿಗ ವಿರಾಟ್ ಕೊಹ್ಲಿ

1,020 ದಿನಗಳ ಬಳಿಕಶತಕ ಬಾರಿಸಿದ ಕೊಹ್ಲಿ ಕುರಿತು ಮಾತನಾಡಿರುವ ಮಹೇಲ, ಅಫ್ಗಾನಿಸ್ತಾನ ವಿರುದ್ಧದ ಇನಿಂಗ್ಸ್ ಕೊಹ್ಲಿಗೆ ಆತ್ಮವಿಶ್ವಾಸ ತಂದುಕೊಟ್ಟಿದೆ. ಅವರು ಈ ರೀತಿ ಬ್ಯಾಟಿಂಗ್ ಮಾಡುವುದನ್ನು ನೋಡಲು ಖುಷಿಯಾಗುತ್ತದೆ ಎಂದು ಹೇಳಿದ್ದಾರೆ.

ಗಾಯದ ಸಮಸ್ಯೆ ಮತ್ತು ಅತಿಯಾದ ಒತ್ತಡದಿಂದಾಗಿ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿತ್ತು.ಕಳೆದ 12 ತಿಂಗಳಿನಿಂದ ಗಾಯದ ಸಮಸ್ಯೆಯಿಂದಾಗಿ ಭಾರತ ತಂಡದ ಕೆಲವು ಆಟಗಾರರಿಗೆ ನಿಯಮಿತವಾಗಿ ವಿಶ್ರಾಂತಿ ನೀಡಲಾಗಿದೆ. ಇದರಿಂದಾಗಿ ಸ್ಥಿರವಾಗಿ ರನ್ ಗಳಿಸಲು ಸಾಧ್ಯವಾಗದಿರುವುದು ಪ್ರಮುಖ ಅಂಶವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೊಹ್ಲಿ ಅಫ್ಗಾನಿಸ್ತಾನ ವಿರುದ್ಧ ಆಡಿದ ರೀತಿಯಲ್ಲಿ ಬ್ಯಾಟಿಂಗ್ ಮಾಡುವುದನ್ನು ನೋಡುವುದೇ ಚೆಂದ. ಇಂತಹ ಅತ್ಯುತ್ತಮ ಆಟಗಾರರು ವಿಶ್ವಕಪ್‌ನಲ್ಲಿ ತಮ್ಮ ಅತ್ಯುತ್ತಮ ಫಾರ್ಮ್‌ನಲ್ಲಿ ಇರುವುದು ಮುಖ್ಯ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ವಿಶ್ವಕಪ್ ಎಲ್ಲರ ಗಮನ ಸೆಳೆಯಲಿದೆ ಎಂದು ಹೇಳಿದ್ದಾರೆ.

ಗಾಯದಿಂದ ಚೇತರಿಸಿಕೊಂಡಿರುವ ಬೂಮ್ರಾ ಬಗ್ಗೆಯೂ ಮಾತನಾಡಿರುವ ಮಹೇಲ, ಏಷ್ಯಾ ಕಪ್ ಟೂರ್ನಿಯಲ್ಲಿ ಬೂಮ್ರಾ ಇಲ್ಲದೇ ಇದ್ದದ್ದು ಖಂಡಿತವಾಗಿಯೂ ಹಿನ್ನಡೆಯಾಯಿತು. ಇದೀಗ ಅವರು ವಾಪಸ್ ಆಗಿರುವುದು ಭಾರತದ ಬೌಲಿಂಗ್ ವಿಭಾಗಕ್ಕೆ ಬಲ ತುಂಬಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾರತ ತಂಡ ವಿಶ್ವಕಪ್ ಟೂರ್ನಿಗೂ ಮುನ್ನ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಚುಟುಕುಸರಣಿಯಲ್ಲಿ ಆಡಲಿದೆ.

ಇದನ್ನೂ ಓದಿ:ಜಡೇಜ ಅಲಭ್ಯತೆಯಿಂದ ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ ಹಿನ್ನಡೆಯಾಗಲಿದೆ: ಮಹೇಲ

ಟಿ20 ವಿಶ್ವಕಪ್‌ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್‌ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷ್‌ದೀಪ್ ಸಿಂಗ್.

ಸ್ಟ್ಯಾಂಡ್‌ಬೈ ಆಟಗಾರರು:ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯಿ, ದೀಪಕ್ ಚಾಹರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.