ನವದೆಹಲಿ: 2023ರ ಅಕ್ಟೋಬರ್ 5 ರಿಂದ ನವೆಂಬರ್ 19ರ ವರೆಗೆ ನಡೆಯಲಿರುವ ಈ ಬಾರಿಯ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಇಂದು ಬಿಡುಗಡೆ ಮಾಡಿದೆ.

ಆತಿಥೇಯ ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 8ರಂದು ಆಡಲಿದ್ದು, ಚೆನ್ನೈನಲ್ಲಿ ನಡೆಯುವ ಈ ಹಣಾಹಣಿಯಲ್ಲಿ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾದ ಸವಾಲು ಎದುರಿಸಲಿದೆ. ಭಾರತ ತಂಡವನ್ನು ರೋಹಿತ್ ಶರ್ಮ ಮುನ್ನಡೆಸಲಿದ್ದಾರೆ.

ಬೆಂಗಳೂರಿನಲ್ಲಿ ಐದು ಪಂದ್ಯಗಳು
ವಿಶ್ವಕಪ್ ಪಂದ್ಯಗಳು ದೇಶದ 10 ನಗರಗಳಲ್ಲಿ ನಡೆಯಲಿವೆ. ಹೈದರಾಬಾದ್, ಅಹಮದಾಬಾದ್, ದೆಹಲಿ, ಚೆನ್ನೈ, ಧರ್ಮಶಾಲಾ, ಲಖನೌ, ಪುಣೆ, ಬೆಂಗಳೂರು, ಮುಂಬೈ ಮತ್ತು ಕೋಲ್ಕತ್ತದಲ್ಲಿ ವೇದಿಕೆ ಸಜ್ಜಾಗಿದೆ.

ಟೂರ್ನಿಯಲ್ಲಿ ಒಟ್ಟು 48 ಪಂದ್ಯಗಳು ನಡೆಯಲಿದ್ದು ಈ ಪೈಕಿ 5 ಪಂದ್ಯಗಳು ಬೆಂಗಳೂರಿನಲ್ಲಿ ಆಯೋಜನೆಗೊಳ್ಳಲಿವೆ. ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ ಪಂದ್ಯವು ಅಕ್ಟೋಬರ್ 20ರಂದು ನಡೆಯಲಿದ್ದು, ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ.

ನಂತರದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಪಡೆ ಕ್ವಾಲಿಫೈಯರ್ 2 ತಂಡದೊಂದಿಗೆ ಅಕ್ಟೋಬರ್ 26ರಂದು ಸೆಣಸಲಿದೆ.

ಇದನ್ನೂ ಓದಿ: ಏಕದಿನ ಕ್ರಿಕೆಟ್ ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಭಾರತ–ಪಾಕ್ ಹಣಾಹಣಿಗೆ ಮುಹೂರ್ತ ನಿಗದಿ

ನವೆಂಬರ್ 4ರಂದು ನ್ಯೂಜಿಲೆಂಡ್, ಪಾಕಿಸ್ತಾನ ಹಾಗೂ ನವೆಂಬರ್ 9ರಂದು ನ್ಯೂಜಿಲೆಂಡ್, ಕ್ವಾಲಿಫೈಯರ್ 2 ನಡುವಿನ ಪಂದ್ಯ ನಡೆಯಲಿದೆ.

ಬೆಂಗಳೂರಿನಲ್ಲಿ ನಡೆಯುವ ಕೊನೇ ಪಂದ್ಯದಲ್ಲಿ ಭಾರತ ತಂಡವು ಕ್ವಾಲಿಫೈಯರ್ 1 ಎದುರು ನವೆಂಬರ್ 15 ರಂದು ಆಡಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.