ಭಾರತ – ಆಸ್ಟ್ರೇಲಿಯಾ ನಡುವೆ ಇತ್ತೀಚೆಗೆ ಅಂತ್ಯಗೊಂಡ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಉಭಯ ತಂಡಗಳೂ ನಿಧಾನಗತಿಯ ಓವರ್ ಮಾಡಿದ್ದು, ಕ್ರಿಕೆಟ್ ತಜ್ಞರು ಹಾಗೂ ಮಾಜಿ ಕ್ರಿಕೆಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನು ತಪ್ಪಿಸಲು ಇಂಗ್ಲೆಂಡ್ ತಂಡ ಮಾಜಿ ಆಟಗಾರ ಮೈಕಲ್ ವಾನ್ ಸಲಹೆಯೊಂದನ್ನು ಮುಂದಿಟ್ಟಿದ್ದಾರೆ. ಎದುರಾಳಿ ತಂಡಕ್ಕೆ ಭಾರೀ ರನ್ ಪೆನಾಲ್ಟಿಯಾಗಿ ನೀಡುವುದು ಇದಕ್ಕೆ ಪರಿಹಾರ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೇ ದಂಡ ವಿಧಿಸುವುದು ಇದಕ್ಕೆ ಪರಿಣಾಮಕಾರಿಯಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ದಂಡ ಇದಕ್ಕೆ ಕೆಲಸ ಮಾಡುವುದಿಲ್ಲ. ದಿನದಾಟದ ಅಂತ್ಯಕ್ಕೆ ಎದುರಾಳಿ ತಂಡಕ್ಕೆ ಇಂತಿಷ್ಟು ರನ್ ಪೆನಾಲ್ಟಿಯಾಗಿ ನೀಡಬಹುದು. ಪ್ರತೀ ಓವರ್ಗೆ 20 ರನ್ಗಳಂತೆ‘ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಪಂದ್ಯದಲ್ಲಿ ನಿಧಾನಗತಿಯ ಓವರ್ ಮಾಡಿದ್ದಕ್ಕೆ ಭಾರತ ತಂಡಕ್ಕೆ ಪಂದ್ಯದ ಸಂಭಾವನೆಯ ಶೇ 100 ಹಾಗೂ ಆಸ್ಟ್ರೇಲಿಯಾ ತಂಡಕ್ಕೆ ಪಂದ್ಯದ ಸಂಭಾವನೆಯ ಶೇ 80 ರಷ್ಟು ದಂಡ ವಿಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.