ನವದೆಹಲಿ: ಟೀಮ್ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಅವರಿಗೆ ಇಂಗ್ಲೆಂಡ್‌ನ ಆಸ್ಪತ್ರೆಯೊಂದರಲ್ಲಿ ಹಿಮ್ಮಡಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿದೆ.

ಶಸ್ತ್ರಚಿಕಿತ್ಸೆ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ನಾನು ಯಶಸ್ವಿಯಾಗಿ ಪಾದದ ಸ್ನಾಯುರಜ್ಜು (ಹಿಮ್ಮಡಿ) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ಸಂಪೂರ್ಣವಾಗಿ ಗುಣಮುಖನಾಗಲು ಒಂದಷ್ಟು ಸಮಯ ಬೇಕಾಗುತ್ತದೆ. ಆದರೆ, ಶೀಘ್ರದಲ್ಲೇ ಗುಣಮುಖನಾಗುವ ವಿಶ್ವಾಸವಿದೆ’ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್‌ಗೆ ಸಾವಿರಾರು ಅಭಿಮಾನಿಗಳು ಪ್ರತಿಕ್ರಿಯಿಸಿದ್ದು, ಶೀಘ್ರವೇ ಗುಣಮುಖರಾಗಿ ಬನ್ನಿ ಎಂದು ಹಾರೈಸಿದ್ದಾರೆ.

ಮೊಹಮ್ಮದ್ ಶಮಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ತಿಂಗಳು ಆರಂಭವಾಗಲಿರುವ ಐಪಿಎಲ್ ಟೂರ್ನಿಯಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲೂ ಅವರು ಆಡುತ್ತಿಲ್ಲ. ಕಳೆದ ನವೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಡಿದ್ದರು.
.ಹಿಮ್ಮಡಿ ಗಾಯಕ್ಕೆ ಶಸ್ತ್ರಚಿಕಿತ್ಸೆ: ಐಪಿಎಲ್ ಪಂದ್ಯಾವಳಿಯಿಂದ ಶಮಿ ಹೊರಕ್ಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.