ನವದೆಹಲಿ: ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ಮುಂಬರುವ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಬಂಗಾಳ ತಂಡದ ಪರವಾಗಿ ಕೆಲವು ಪಂದ್ಯಗಳಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಹಿಮ್ಮಡಿಯ ಗಾಯಕ್ಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರು ಶಮಿ ದೀರ್ಘ ಸಮಯದಿಂದ ಕ್ರಿಕೆಟ್‌ನಿಂದ ದೂರವಿದ್ದಾರೆ. ಇದೀಗ ಅವರ ಪುನಶ್ಚೇತನ ಮತ್ತು ಫಿಟ್‌ನೆಸ್ ಆರೈಕೆಯು ಆರಂಭವಾಗಿದೆ. ಅಕ್ಟೋಬರ್ ತಿಂಗಳಲ್ಲಿ ಶುರುವಾಗಲಿರುವ ರಣಜಿ ಟ್ರೋಫಿ ಟೂರ್ನಿಯಲ್ಲಿ ಆಡುವ ಸಾಧ್ಯತೆ ಇದೆ. ಉತ್ತರ ಪ್ರದೇಶ (ಅ.11ರಿಂದ) ಮತ್ತು ಬಿಹಾರ (ಅ. 18ರಿಂದ)ವಿರುದ್ಧದ ಪಂದ್ಯಗಳಲ್ಲಿ ಅವರು ಆಡುಬಹುದು. ಇದರೊಂದಿಗೆ ಭಾರತ ಮತ್ತು ನ್ಯೂಜಿಲೆಂಡ್ ಎದುರಿನ ಟೆಸ್ಟ್ ಸರಣಿಯಲ್ಲಿ ಆಡಲು ಸಿದ್ಧವಾಗುವ ನಿರೀಕ್ಷೆ ಇದೆ.

ಭಾರತ–ನ್ಯೂಜಿಲೆಂಡ್ ತಂಡಗಳು ಬೆಂಗಳೂರು(ಅ.19ರಿಂದ), ಪುಣೆ (ಅ.24ರಿಂದ) (ಪುಣೆ) ಹಾಗೂ ಮುಂಬೈ (ನ.1ರಿಂದ) ನಗರಗಳಲ್ಲಿ ಟೆಸ್ಟ್ ಪಂದ್ಯಗಳನ್ನು ಆಡಲಿವೆ.

34 ವರ್ಷದ ಶಮಿ ಅವರು ಕಳೆದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಮೋಘವಾಗಿ ಆಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.