ಮುಂಬೈ: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಭಾರತದ ಪರ ಅತಿ ಹೆಚ್ಚು ವಿಕೆಟ್ ಗಳಿಸಿದ ಬೌಲರ್ಗಳ ಪಟ್ಟಿಯಲ್ಲಿ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜ ಅಗ್ರ ಐದರ ಪಟ್ಟಿಗೆ ಲಗ್ಗೆ ಇಟ್ಟಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಮುಂಬೈಯ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಜಡೇಜ ಈ ಸ್ಮರಣೀಯ ಸಾಧನೆ ಮಾಡಿದ್ದಾರೆ.

ಟೀ ವಿರಾಮದ ಹೊತ್ತಿಗೆ ಮೂರು ವಿಕೆಟ್ ಗಳಿಸಿರುವ ಜಡೇಜ, ಟೆಸ್ಟ್ ಕ್ರಿಕೆಟ್ನಲ್ಲಿ ಈವರೆಗೆ 312 ವಿಕೆಟ್ಗಳನ್ನು ಗಳಿಸಿದ್ದಾರೆ.

ಆ ಮೂಲಕ ಮಾಜಿ ವೇಗಿಗಳಾದ ಜಹೀರ್ ಖಾನ್ (311) ಮತ್ತು ಇಶಾಂತ್ ಶರ್ಮಾ (311) ದಾಖಲೆಯನ್ನು ಮುರಿದಿದ್ದಾರೆ.

ಭಾರತದ ಪರ ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದ ಬೌಲರ್ಗಳ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ (619) ಮುಂಚೂಣಿಯಲ್ಲಿದ್ದಾರೆ. ರವಿಚಂದ್ರನ್ ಅಶ್ವಿನ್ (533), ಕಪಿಲ್ ದೇವ್ (434) ಮತ್ತು ಹರಭಜನ್ ಸಿಂಗ್ (417) ಅನುಕ್ರಮವಾಗಿ ನಂತರದ ಸ್ಥಾನದಲ್ಲಿದ್ದಾರೆ.

ಈ ಪೈಕಿ ಟಾಪ್ ಐದರ ಪಟ್ಟಿಯಲ್ಲಿ ನಾಲ್ವರು ಸ್ಪಿನ್ ಬೌಲರ್ಗಳು ಕಾಣಿಸಿಕೊಂಡಿದ್ದಾರೆ.

ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಟಾಪ್ 10 ಬೌಲರ್ಗಳ ಪಟ್ಟಿ:

ಅನಿಲ್ ಕುಂಬ್ಳೆ: 619

ರವಿಚಂದ್ರನ್ ಅಶ್ವಿನ್: 533*

ಕಪಿಲ್ ದೇವ್: 434

ಹರಭಜನ್ ಸಿಂಗ್: 417

ರವೀಂದ್ರ ಜಡೇಜ: 312*

ಜಹೀರ್ ಖಾನ್: 311

ಇಶಾಂತ್ ಶರ್ಮಾ: 311

ಬಿಷನ್ ಸಿಂಗ್ ಬೇಡಿ: 266

ಬಿ.ಎಸ್.ಚಂದ್ರಶೇಖರ್: 242

ಜಾವಗಲ್ ಶ್ರೀನಾಥ್: 236

.IND vs NZ Mumbai Test | ಜಡೇಜಗೆ ಐದು ವಿಕೆಟ್; ನ್ಯೂಜಿಲೆಂಡ್ 235ಕ್ಕೆ ಆಲೌಟ್.PHOTOS | IPL 2025: ಎಲ್ಲ 10 ತಂಡಗಳು ಉಳಿಸಿಕೊಂಡ ಆಟಗಾರರ ಸಂಪೂರ್ಣ ಪಟ್ಟಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.