ಕಾನ್ಪುರ: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೂರನೇ ದಿನದಾಟದ ವೇಳೆ ಟೀಮ್ ಇಂಡಿಯಾ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಕುತ್ತಿಗೆ ನೋವಿನ ಕಾರಣ ಮೈದಾನದಿಂದ ನಿರ್ಗಮಿಸಿದರು. ಅವರ ಬದಲಿಗೆ ಕೆ.ಎಸ್.ಭರತ್ ಅವರು ಕೀಪಿಂಗ್ ನಿರ್ವಹಿಸುತ್ತಿದ್ದಾರೆ.

ಇಲ್ಲಿನ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಶುಕ್ರವಾರ ಬ್ಯಾಟಿಂಗ್ ಮಾಡಿದ್ದ ಸಹಾ 12 ಎಸೆತಗಳನ್ನು ಎದುರಿಸಿ ಕೇವಲ 1 ರನ್ ಗಳಿಸಿದ್ದರು. ಬ್ಯಾಟಿಂಗ್ ವೇಳೆ ಟಿಮ್ ಸೌಥೀ ಅವರ ಔಟ್‌ಸ್ವಿಂಗ್ ಎಸೆತವೊಂದರಲ್ಲಿ ಅವರ ಕುತ್ತಿಗೆಗೆ ಏಟಾಗಿತ್ತು.

ಓದಿ:ದಕ್ಷಿಣ ಆಫ್ರಿಕಾ ಪ್ರವಾಸ: ಬಿಸಿಸಿಐ ಮರುಚಿಂತನೆ

ಕುತ್ತಿಗೆ ನೋವಿನ ಕಾರಣ ವೃದ್ಧಿಮಾನ್ ಸಹಾ ಅವರು ಕೀಪಿಂಗ್ ಮಾಡಲು ಸಾಧ್ಯವಾಗುತ್ತಿಲ್ಲ. ವೈದ್ಯಕೀಯ ತಂಡವು ಅವರನ್ನು ಪರಿಶೀಲನೆ ನಡೆಸಿ ಚಿಕಿತ್ಸೆ ನೀಡುತ್ತಿದೆ. ಅವರ ಬದಲಿಗೆ ಕೆ.ಎಸ್.ಭರತ್ ಕೀಪಿಂಗ್ ಮಾಡುತ್ತಿದ್ದಾರೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟ್ವೀಟ್ ಮಾಡಿದೆ.

ಸಹಾ ಅವರು ಮತ್ತೆ ಕೀಪಿಂಗ್‌ಗೆ ಎಷ್ಟೊತ್ತಿಗೆ ಮರಳಲಿದ್ದಾರೆ, ಅವರ ಕುತ್ತಿಗೆಗೆ ಆಗಿರುವ ಏಟಿನ ತೀವ್ರತೆ ಏನು ಎಂಬ ವಿವರಗಳನ್ನು ಬಿಸಿಸಿಐ ಬಹಿರಂಗಪಡಿಸಿಲ್ಲ.

ಓದಿ:ವಿಜಯ್ ಹಜಾರೆ ಟ್ರೋಫಿ: ಕರ್ನಾಟಕಕ್ಕೆ ಮನೀಷ್ ಸಾರಥ್ಯ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಟಾಸ್ ಗೆದ್ದು ಬ್ಯಾಟ್ ಮಾಡಿರುವ ಭಾರತ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 345 ರನ್‌ಗಳಿಗೆ ಆಲೌಟ್ ಆಗಿತ್ತು. ಶುಭಮನ್ ಗಿಲ್ ಮತ್ತು ರವೀಂದ್ರ ಜಡೇಜಾ ಅರ್ಧಶತಕ ಹಾಗೂ ಶ್ರೇಯಸ್ ಅಯ್ಯರ್ ಶತಕ ದಾಖಲಿಸಿದ್ದರು. ಮೂರನೇ ದಿನದಾಟದ ಭೋಜನ ವಿರಾಮದ ವೇಳೆಗೆ ನ್ಯೂಜಿಲೆಂಡ್ ತಂಡವು ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 2 ವಿಕೆಟ್ ಕಳೆದುಕೊಂಡು 197 ರನ್ ಗಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.