ವೆಲ್ಲಿಂಗ್ಟನ್: ಮುಂಬರುವ ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ನಡೆಯಲಿರುವ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ಗೆ ವಿದಾಯ ಘೋಷಿಸುವುದಾಗಿ ನ್ಯೂಜಿಲೆಂಡ್ನ ವೇಗದ ಬೌಲರ್ ಟಿಮ್ ಸೌಥಿ ತಿಳಿಸಿದ್ದಾರೆ.

ಡಿಸೆಂಬರ್ 14ರಂದು ಹ್ಯಾಮಿಲ್ಟನ್ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯ ಸೌಥಿ ಪಾಲಿಗೆ ಕೊನೆಯ ಟೆಸ್ಟ್ ಪಂದ್ಯವಾಗಿರಲಿದೆ.

35 ವರ್ಷದ ಸೌಥಿ, ಟೆಸ್ಟ್ ಕ್ರಿಕೆಟ್ನಲ್ಲಿ ನ್ಯೂಜಿಲೆಂಡ್ ಪರ ಅತಿ ಹೆಚ್ಚು ವಿಕೆಟ್ ಗಳಿಸಿದ ಎರಡನೇ ಬೌಲರ್ ಆಗಿದ್ದಾರೆ. ಈವರೆಗೆ 104 ಟೆಸ್ಟ್ ಪಂದ್ಯಗಳಲ್ಲಿ 385 ವಿಕೆಟ್ಗಳನ್ನು ಗಳಿಸಿದ್ದಾರೆ.

2008ರಲ್ಲಿ 19ರ ಹರೆಯದಲ್ಲಿ ಟಿಮ್ ಸೌಥಿ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಿದ್ದರು. ಅಲ್ಲದೆ ಮೊದಲ ಪಂದ್ಯದಲ್ಲೇ ಇಂಗ್ಲೆಂಡ್ ವಿರುದ್ಧ ಐದು ವಿಕೆಟ್ ಗಳಿಸಿದ್ದರು.

ಸುದೀರ್ಘ ವೃತ್ತಿ ಜೀವನದಲ್ಲಿ ಟೀಮ್ ಸೌಥಿ, ಟೆಸ್ಟ್ನಲ್ಲಿ 300ಕ್ಕೂ ಹೆಚ್ಚು ವಿಕೆಟ್, ಏಕದಿನದಲ್ಲಿ 200ಕ್ಕೂ ಹೆಚ್ಚು ವಿಕೆಟ್ ಮತ್ತು ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ 100ಕ್ಕೂ ಹೆಚ್ಚು ವಿಕೆಟ್ ಗಳಿಸಿದ ಏಕಮಾತ್ರ ಬೌಲರ್ ಎನಿಸಿದ್ದಾರೆ.

ಟಿಮ್ ಸೌಥಿ, ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ನ್ಯೂಜಿಲೆಂಡ್ ಪರ ಅತಿ ಹೆಚ್ಚು ವಿಕೆಟ್ (770) ಗಳಿಸಿದ ಬೌಲರ್ ಆಗಿದ್ದಾರೆ. ಹಾಗೆಯೇ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ಹೆಚ್ಚು ವಿಕೆಟ್ (164) ಗಳಿಸಿದ ಬೌಲರ್ ಎಂಬ ದಾಖಲೆಯು ಸೌಥಿ ಹೆಸರಲ್ಲಿದೆ.

ಟೆಸ್ಟ್ ಕ್ರಿಕೆಟ್ನಲ್ಲಿ 96 ಸಿಕ್ಸರ್ ಮತ್ತು ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಎರಡು ಸಲ ಹ್ಯಾಟ್ರಿಕ್ ವಿಕೆಟ್ ಸಾಧನೆಯನ್ನು ಮಾಡಿದ್ದಾರೆ.

ಟಿಮ್ ಸೌಥಿ, 161 ಏಕದಿನ ಹಾಗೂ 126 ಟ್ವೆಂಟಿ-20 ಅಂತರರಾಷ್ಟ್ರೀಯ ಪಂದ್ಯಗಳಲ್ಲೂ ನ್ಯೂಜಿಲೆಂಡ್ ತಂಡವನ್ನು ಪ್ರತಿನಿಧಿಸಿದ್ದಾರೆ.

ಇತ್ತೀಚಿನ ಭಾರತದ ವಿರುದ್ಧ ಐತಿಹಾಸಿಕ ಟೆಸ್ಟ್ ಸರಣಿ ಗೆಲುವಿನಲ್ಲಿ ಸೌಥಿ ಮಹತ್ವದ ಪಾತ್ರ ವಹಿಸಿದ್ದರು. ಕಿವೀಸ್ ತಂಡದ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

'ನ್ಯೂಜಿಲೆಂಡ್ ತಂಡವನ್ನು ಪ್ರತಿನಿಧಿಸುವುದು ನನ್ನ ಕನಸಾಗಿತ್ತು. 18 ವರ್ಷಗಳ ಕಾಲ ಆಡಿರುವುದು ನನಗೆ ದೊರಕಿರುವ ದೊಡ್ಡ ಗೌರವವಾಗಿದೆ' ಎಂದು ಟಿಮ್ ಸೌಥಿ ಪ್ರತಿಕ್ರಿಯಿಸಿದ್ದಾರೆ.

ಒಂದು ವೇಳೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ಗೆ ನ್ಯೂಜಿಲೆಂಡ್ ಪ್ರವೇಶಿಸಿದ್ದಲ್ಲಿ ತಾವು ಆಯ್ಕೆಗೆ ಲಭ್ಯವಿರುವುದಾಗಿ ಸೌಥಿ ಖಚಿತಪಡಿಸಿದ್ದಾರೆ.
.ಐಸಿಸಿ ಚಾಂಪಿಯನ್ಸ್ ಟ್ರೋಫಿ ನಂತರ ಮೊಹಮ್ಮದ್ ನಬಿ ನಿವೃತ್ತಿ.Ranji Trophy ಒಂದೇ ಇನಿಂಗ್ಸ್ನಲ್ಲಿ 10 ವಿಕೆಟ್;ಅಂಶುಲ್ ಕಂಬೋಜ್ ವಿಶಿಷ್ಟ ಸಾಧನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.