ವೆಲ್ಲಿಂಗ್ಟನ್: ಭಾರತ ವಿರುದ್ಧ ನಡೆಯಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ 15 ಸದಸ್ಯರ ಬಳಗದ ನ್ಯೂಜಿಲೆಂಡ್ ತಂಡವನ್ನು ಪ್ರಕಟಿಸಲಾಗಿದ್ದು, ಐವರು ಸ್ಪಿನ್ನರ್‌ಗಳಿಗೆ ಸ್ಥಾನ ಕಲ್ಪಿಸಲಾಗಿದೆ.

ಬಯೋಬಬಲ್ ದಣಿವಿನಿಂದಾಗಿ ಅನುಭವಿ ಎಡಗೈ ವೇಗದ ಬೌಲರ್ ಟ್ರೆಂಟ್ ಬೌಲ್ಟ್ ಹಾಗೂ ಆಲ್‌ರೌಂಡರ್ ಕಾಲಿನ್ ಡಿ ಗ್ರ್ಯಾಂಡ್‌ಹೋಮ್ ಟೂರ್ನಿಗೆ ಅಲಭ್ಯರಾಗಿದ್ದಾರೆ.

ಇದನ್ನೂ ಓದಿ:T20 WC: ಸ್ಕಾಟ್ಲೆಂಡ್ ವಿರುದ್ಧ ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿದೆ

ಆಟಗಾರರ ಯೋಗಕ್ಷೇಮಕ್ಕಾಗಿ ಮೊದಲ ಆದ್ಯತೆ ಕೊಡಲಾಗಿದೆ ಎಂದು ನ್ಯೂಜಿಲೆಂಡ್‌ನ ಕೋಚ್ ಗ್ಯಾರಿ ಸ್ಟೀಡ್ ತಿಳಿಸಿದ್ದಾರೆ.

ನ್ಯೂಜಿಲೆಂಡ್ ತಂಡದಲ್ಲಿ ಐವರು ಸ್ಪಿನ್ನರ್‌ಗಳನ್ನು ಹೆಸರಿಸಲಾಗಿದೆ. ಅಜಾಜ್ ಪಟೇಲ್, ವಿಲ್ ಸೋಮರ್‌ವಿಲ್, ಮಿಚೆಲ್ ಸ್ಯಾಂಟ್ನರ್, ರಚಿನ್ ರವೀಂದ್ರ ಹಾಗೂ ಗ್ಲೆನ್ ಫಿಲಿಪ್ಸ್ ತಂಡದಲ್ಲಿ ಸ್ಥಾನ ಗಿಟ್ಟಿಸಿದ್ದಾರೆ.

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಟೆಸ್ಟ್ ಸರಣಿಯ ವೇಳಾಪಟ್ಟಿ ಇಂತಿದೆ:
ಮೊದಲ ಟೆಸ್ಟ್ (ನ. 25-29): ಕಾನ್ಪುರ
ದ್ವಿತೀಯ ಟೆಸ್ಟ್ (ಡಿ. 3-7): ಮುಂಬೈ

ನ್ಯೂಜಿಲೆಂಡ್ ತಂಡ ಇಂತಿದೆ:
ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಡೆವೊನ್ ಕಾನ್ವೆ, ಕೈಲ್ ಜೇಮಿಸನ್, ಟಾಮ್ ಲೇಥಮ್, ಹೆನ್ರಿ ನಿಕೋಲಸ್, ಅಜಾಜ್ ಪಟೇಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ವಿಲ್ ಸೋಮರ್‌ವಿಲ್, ಟಿಮ್ ಸೌಥಿ, ರಾಸ್ ಟೇಲರ್, ವಿಲ್ ಯಂಗ್ ಮತ್ತು ನೀಲ್ ವ್ಯಾಗ್ನರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.