ಹ್ಯಾಮಿಲ್ಟನ್: ಇಲ್ಲಿನ ನಡೆಯುತ್ತಿರುವ ಭಾರತ ವಿರುದ್ಧದ ಮೂರನೇ ಟಿ–20 ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಈಗಾಗಲೇ ಸರಣಿ ಸೋತಿರುವ ಭಾರತ ಮಹಿಳಾ ತಂಡ ನ್ಯೂಜಿಲೆಂಡ್ ಎದುರಿನ ಅಂತಿಮ ಟ್ವೆಂಟಿ–20 ಪಂದ್ಯದಲ್ಲಿ ಗೆದ್ದು ಗೌರವ ಉಳಿಸಿಕೊಳ್ಳುವ ವಿಶ್ವಾಸದಲ್ಲಿದೆ.

ಸರಣಿ ಗೆದ್ದು ಬೀಗುತ್ತಿರುವ ನ್ಯೂಜಿಲೆಂಡ್ ವನಿತೆಯರು, ಅಂತಿಮ ಪಂದ್ಯದಲ್ಲೂ ಪ್ರವಾಸಿ ಪಡೆಯನ್ನು ಮಣಿಸಿ ‘ಕ್ಲೀನ್ ಸ್ವೀಪ್’ ಸಾಧನೆ ಮಾಡುವ ಹಂಬಲದಲ್ಲಿದ್ದಾರೆ.

ಸೋಫಿ ಡಿವೈನ್, ಸೂಝಿ ಬೇಟ್ಸ್, ಆ್ಯಮಿ ಸಟ್‌ವರ್ಥ್‌ವೇಟ್ ಮತ್ತು ಕೇಟಿ ಮಾರ್ಟಿನ್ ಅವರು ಬ್ಯಾಟಿಂಗ್‌ನಲ್ಲಿ ಈ ತಂಡದ ಶಕ್ತಿಯಾಗಿದ್ದಾರೆ. ಬೌಲಿಂಗ್‌ನಲ್ಲೂ ತಂಡ ಬಲಿಷ್ಠವಾಗಿದೆ.

2–1ರಿಂದ ಏಕದಿನ ಸರಣಿ ಜಯಿಸಿದ್ದ ಹರ್ಮನ್‌ಪ್ರೀತ್ ಕೌರ್ ಬಳಗ ಚುಟುಕು ಮಾದರಿಯ ಮೊದಲ ಎರಡು ಪಂದ್ಯಗಳಲ್ಲಿ ನಿರಾಸೆ ಕಂಡಿತ್ತು. 2020ರ ಐಸಿಸಿ ವಿಶ್ವ ಟ್ವೆಂಟಿ–20 ಟೂರ್ನಿಗೆ ಬಲಿಷ್ಠ ತಂಡ ಕಟ್ಟುವ ಉದ್ದೇಶದಿಂದ ತಂಡದ ಆಡಳಿತ ಮಂಡಳಿ ಅನುಭವಿ ಆಟಗಾರ್ತಿ ಮಿಥಾಲಿ ರಾಜ್ ಅವರನ್ನು ಹೊರಗಿಟ್ಟು ಯುವ ಆಟಗಾರ್ತಿಯರಿಗೆ ಅವಕಾಶ ನೀಡಿತ್ತು. ಈ ಯೋಜನೆ ಎರಡೂ ಪಂದ್ಯಗಳಲ್ಲೂ ಕೈಕೊಟ್ಟಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.