ಬೆಂಗಳೂರು: ಭಾನುವಾರದಿಂದ ನಗರದ ಹೊರವಲಯದಲ್ಲಿರುವ ಆಲೂರಿನ ಕೆಎಸ್ಸಿಎ ಕ್ರೀಡಾಂಗಣದಲ್ಲಿ ನಡೆಯಲಿರುವ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಕ್ರಿಕೆಟ್ ಟೂರ್ನಿಯ ಪಂದ್ಯಗಳಿಗೆ ಪ್ರೇಕ್ಷಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

’ಆಲೂರು 1,2 ಮತ್ತು 3ನೇ ಮೈದಾನಗಳಲ್ಲಿ ಎಲೀಟ್ ಎ ಗುಂಪಿನ ಪಂದ್ಯಗಳು ನಡೆಯಲಿವೆ. ಕೋವಿಡ್ ತಡೆ ಮಾರ್ಗಸೂಚಿಯ ಪ್ರಕಾರ ಪಂದ್ಯ ವೀಕ್ಷಿಸಲು ಪ್ರೇಕ್ಷಕರು ಮತ್ತು ವರದಿ ಮಾಡಲು ಮಾಧ್ಯಮ ಪ್ರತಿನಿಧಿಗಳಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಮಾರ್ಗಸೂಚಿ ಸಿದ್ಧಪಡಿಸಿದೆ. ಟೂರ್ನಿಯ ಪಂದ್ಯಗಳು ನಡೆಯುತ್ತಿರುವ ಎಲ್ಲ ನಗರಗಳಲ್ಲಿಯೂ ಇದು ಜಾರಿಯಾಗಿದೆ. ಆಯೋಜಕ ಸಂಸ್ಥೆಯ ಆಯ್ದ ಪ್ರತಿನಿಧಿಗಳು, ನಿಯೋಜಿತ ಸಿಬ್ಬಂದಿ, ಆಟಗಾರರು, ತಂಡದ ಸಿಬ್ಬಂದಿ ಮತ್ತು ಮೈದಾನದ ನಿಯೋಜಿತ ಸಿಬ್ಬಂದಿಗೆ ಮಾತ್ರ ಪ್ರವೇಶ ನೀಡಲಾಗುವುದು. ಜೀವ ಸುರಕ್ಷಾ ವಲಯದ ಕಾರಣ ಬಹಳಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ‘ ಎಂದು ಕೆಎಸ್ಸಿಎ ವಕ್ತಾರ ವಿನಯ್ ಮೃತ್ಯುಂಜಯ ತಿಳಿಸಿದ್ದಾರೆ.

ಆಟಗಾರರು ಸುರಕ್ಷಿತ: ನಗರದ ಎರಡು ಹೋಟೆಲ್ಗಳಲ್ಲಿ ತಂಡಗಳ ವಸತಿ ವ್ಯವಸ್ಥೆ ಮಾಡಲಾಗಿದೆ. ಜನವರಿ 2ರಂದು ಆಗಮಿಸಿರುವ ತಂಡಗಳ ಆಟಗಾರರಿಗೆ ಕೋವಿಡ್ ತಪಾಸಣೆ ಮಾಡಲಾಗಿದೆ. ಎಲ್ಲರ ವರದಿಯೂ ನೆಗೆಟಿವ್ ಬಂದಿದೆ. ಶುಕ್ರವಾರ ಮತ್ತು ಶನಿವಾರ ಅಭ್ಯಾಸಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.