ನವದೆಹಲಿ: ಬರಲಿರುವ ಅಕ್ಟೋಬರ್ನಿಂದ ಆರಂಭವಾಗಲಿರುವ ವಿಶ್ವಕಪ್ ಕ್ರಿಕೆಟ್ ಏಕದಿನ ಪಂದ್ಯಾವಳಿಗೆ 15 ಆಟಗಾರರ ಭಾರತ ತಂಡವನ್ನು ಬಿಸಿಸಿಐ ಮಂಗಳವಾರ ಪ್ರಕಟಿಸಿದೆ.

ರೋಹಿತ್ ಶರ್ಮಾ ನಾಯಕತ್ವದಲ್ಲಿ ಈ ಬಾರಿ ವಿಶ್ವಕಪ್ನಲ್ಲಿ ಭಾರತ ತಂಡ ಪಾಲ್ಗೊಳ್ಳಲಿದೆ. ಹಾರ್ದಿಕ್ ಪಾಂಡ್ಯಾ ಉಪನಾಯಕರಾಗಿರಲಿದ್ದಾರೆ. ಕೆಲ ಸ್ಟಾರ್ ಆಟಗಾರರಿಗೆ ಈ ಬಾರಿ ವಿಶ್ವಕಪ್ನಿಂದ ಕೊಕ್ ನೀಡಲಾಗಿದೆ.

ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಅವರನ್ನು ಕೈಬಿಡಲಾಗಿದೆ. ಗಾಯಗೊಂಡಿದ್ದ ಕೆ.ಎಲ್.ರಾಹುಲ್ ಹಾಗೂ ಶ್ರೇಯಸ್ ಐಯ್ಯರ್ ತಂಡಕ್ಕೆ ಮರಳಿದ್ದಾರೆ.

ಈ ಬಾರಿ ತಂಡದಲ್ಲಿ ಮೂವರು ಎಡಗೈ ಸ್ಪಿನ್ನರ್ಗಳು, ಮೂವರು ವೇಗಿಗಳನ್ನು ಬಿಸಿಸಿಐ ಆಯ್ಕೆ ಮಾಡಿದೆ. ಈ ಕುರಿತು ರೋಹಿತ್ ಶರ್ಮಾ ಮತ್ತು ಬಿಸಿಸಿಐ ಆಯ್ಕೆ ಸಮಿತಿಯ ಮುಖ್ಯಸ್ಥ ಅಜಿತ್ ಅಗರ್ಕರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಐಯ್ಯರ್, ಇಶಾನ್ ಕೀಶನ್, ಕೆ.ಎಲ್.ರಾಹುಲ್, ಹಾರ್ದಿಕ್ ಪಾಂಡ್ಯಾ (ಉಪನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಆಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಜಸಪ್ರೀತ್ ಬೂಮ್ರಾ, ಮಹಮ್ಮದ್ ಶಮಿ, ಮಹಮ್ಮದ್ ಸಿರಾಜ್, ಕುಲದೀಪ್ ಯಾದವ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.