ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಆಡುವ ರಾಜಸ್ಥಾನ ರಾಯಲ್ಸ್ ತಂಡಕ್ಕೆ ವಿಕ್ರಂ ರಾಥೋಡ್ ಅವರನ್ನು ಬ್ಯಾಟಿಂಗ್ ಕೋಚ್ ಆಗಿ ನೇಮಕ ಮಾಡಲಾಗಿದೆ.

ಇದೇ ತಂಡಕ್ಕೆ ಈಚೆಗಷ್ಟೇ ರಾಹುಲ್ ದ್ರಾವಿಡ್ ಅವರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿತ್ತು. ದ್ರಾವಿಡ್ ಅವರು ಭಾರತ ತಂಡದ ಮುಖ್ಯ ಕೋಚ್ ಆಗಿದ್ದ ಸಂದರ್ಭದಲ್ಲಿ ವಿಕ್ರಂ ಅವರು ಬ್ಯಾಟಿಂಗ್ ತರಬೇತುದಾರರಾಗಿದ್ದರು. ವಿಕ್ರಂ ಅವರು ಈ ಹಿಂದೆ ಭಾರತ ತಂಡದ ಆರಂಭಿಕ ಬ್ಯಾಟರ್ ಆಗಿ ಆಡಿದ್ದರು.

‘ರಾಥೋಡ್ ಅವರು ಪರಿಣತ ಬ್ಯಾಟಿಂಗ್ ಕೋಚ್ ಆಗಿದ್ದಾರೆ. ಅವರನ್ನು ರಾಯಲ್ಸ್ ಬಳಗಕ್ಕೆ ಸ್ವಾಗತಿಸುತ್ತೇವೆ’ ಎಂದು ಫ್ರ್ಯಾಂಚೈಸಿಯು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಾಕಿದೆ.

‘ದ್ರಾವಿಡ್ ಅವರು ಮುಖ್ಯ ಕೋಚ್ ಮತ್ತು ವಿಕ್ರಂ ಅವರು ಬ್ಯಾಟಿಂಗ್ ಮಾರ್ಗದರ್ಶಕರಾಗಿದ್ದ ಸಂದರ್ಭದಲ್ಲಿ ಭಾರತ ತಂಡವು ಟಿ20 ವಿಶ್ವಕಪ್ ಜಯಿಸಿತ್ತು. ಅವರ ಅವಧಿಯಲ್ಲಿ ಎಲ್ಲ ಮೂರು ಮಾದರಿಗಳಲ್ಲಿಯೂ ತಂಡವು ಉತ್ತಮ ಸಾಧನೆ ಮಾಡಿತ್ತು’ ಎಂದು ಫ್ರ್ಯಾಂಚೈಸಿ ಹೇಳಿದೆ.

ರಾಥೋಡ್ ಅವರು ಭಾರತ ತಂಡದಲ್ಲಿ ಆರು ಟೆಸ್ಟ್ ಮತ್ತು ಏಳು ಏಕದಿನ ಪಂದ್ಯಗಳನ್ನು ಆಡಿದ್ದರು. 33 ಪ್ರಥಮ ದರ್ಜೆ ಪಂದ್ಯಗಳನ್ನೂ ಆಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.