ಬೆಂಗಳೂರು:ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ರಜತ್ ಪಾಟೀದಾರ್ ಅವರ ಹಿಮ್ಮಡಿಯ ಗಾಯಕ್ಕೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ಮಧ್ಯಪ್ರದೇಶದ 29 ವರ್ಷದ ರಜತ್ ಐಪಿಎಲ್ ಟೂರ್ನಿಗೂ ಮುನ್ನ ಆರ್‌ಸಿಬಿ ಶಿಬಿರದಲ್ಲಿದ್ದಾಗಲೇ ಗಾಯಗೊಂಡಿದ್ದರು. ಆದ್ದರಿಂದ ಅವರನ್ನು ಎನ್‌ಸಿಎ (ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ)ಗೆ ಪುನಶ್ಚೇತನಕ್ಕಾಗಿ ಕಳುಹಿಸಲಾಗಿತ್ತು. ಆದ್ದರಿಂದ ಅವರು ಐಪಿಎಲ್‌ನಿಂದ ಹೊರಗುಳಿದರು. ಆದರೆ ಅಲ್ಲಿ ಅವರು ಚೇತರಿಸಿಕೊಳ್ಳದ ಕಾರಣ ಶಸ್ತ್ರಚಿಕಿತ್ಸೆ ಮಾಡಲಾಯಿತು.

ಹೋದ ವರ್ಷದ ಐಪಿಎಲ್ ಟೂರ್ನಿಯ ಪ್ಲೇ ಆಫ್‌ನಲ್ಲಿ ಅವರು ಅಜೇಯ ಶತಕ ಗಳಿಸಿದ್ದರು.

’ಈಚೆಗೆ ನನಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಎಲ್ಲವೂ ಸುಗಮವಾಗಿ ನಡೆದು ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಬಹಳ ಕಾಲದಿಂದ ತೊಂದರೆ ಕೊಡುತ್ತಿದ್ದ ಗಾಯದ ಸಮಸ್ಯೆ ಪರಿಹಾರವಾಗಿದೆ. ನನ್ನನ್ನು ಬೆಂಬಲಿಸುತ್ತಿರುವ ಎಲ್ಲರಿಗೂ ಕೃತಜ್ಞತೆಗಳು‘ ಎಂದು ರಜತ್ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರಸಹಿತ ಸಂದೇಶ ಹಾಕಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.