ಮುಂಬೈ: ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ 16 ಆಟಗಾರರನ್ನು ಒಳಗೊಂಡ ಭಾರತ ತಂಡವನ್ನು ಬಿಸಿಸಿಐ ಭಾನುವಾರ ಪ್ರಕಟಿಸಿದೆ. ವಿಕೆಟ್‌ಕೀಪರ್, ಬ್ಯಾಟರ್ ರಿಷಭ್ ಪಂತ್ ಬಹುದಿನಗಳ ಬಳಿಕ ಟೆಸ್ಟ್ ತಂಡಕ್ಕೆ ಮರಳಿದ್ದಾರೆ.

ಎರಡು ಟೆಸ್ಟ್ ಸರಣಿಯ ಮೊದಲ ಪಂದ್ಯ ಇದೇ 19 ರಿಂದ 23 ರವರೆಗೆ ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ.

ಬ್ಯಾಟರ್ ಕೆ.ಎಲ್. ರಾಹುಲ್, ವೇಗದ ಬೌಲರ್ ಯಶ್ ದಯಾಲ್ ಅವರಿಗೂ ಸ್ಥಾನ ಸಿಕ್ಕಿದೆ. ಇವರಲ್ಲದೆ, ವಿರಾಟ್ ಕೊಹ್ಲಿ ಮತ್ತು ಜಸ್‌ಪ್ರೀತ್ ಬೂಮ್ರಾ ಕೂಡ ಸರಣಿ ಆಡಲಿದ್ದಾರೆ.

ಸುದೀರ್ಘ 21 ತಿಂಗಳ ನಂತರ ಪಂತ್ ಬಾಂಗ್ಲಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆಡಲಿದ್ದಾರೆ. 2022ರ ಡಿಸೆಂಬರ್‌ನಲ್ಲಿ ಭೀಕರ ಕಾರು ಅಪಘಾತದ ನಂತರ ರಿಷಬ್ ಪಂತ್ ತಂಡದಿಂದ ಹೊರಗುಳಿದಿದ್ದರು. ಇದಾದ ಬಳಿಕ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ಆಡಿದ್ದರು. ಧ್ರುವ ಜುರೇಲ್ ಅವರನ್ನೂ ಎರಡನೇ ವಿಕೆಟ್ ಕೀಪರ್ ಬ್ಯಾಟರ್ ಆಗಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್, ಧ್ರುವ ಜುರೇಲ್ (ಇಬ್ಬರೂ ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಕುಲ್‌ದೀಪ್ ಯಾದವ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಜಸ್‌ಪ್ರೀತ್ ಬೂಮ್ರಾ, ಯಶ್ ದಯಾಳ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.