ರಾಜ್ಕೋಟ್ (ಪಿಟಿಐ): ದೀರ್ಘ ಕಾಲದ ನಂತರ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ಭಾರತ ಕ್ರಿಕೆಟ್ ತಂಡಕ್ಕೆ ಮರಳಿದ್ದಾರೆ.

ಭಾರತದ ಆತಿಥ್ಯದಲ್ಲಿ ನಡೆಯಲಿರುವ ಅಫ್ಗಾನಿಸ್ತಾನ ಎದುರಿನ ಮೂರು ಟಿ20 ಪಂದ್ಯಗಳ ಸರಣಿಯಲ್ಲಿ ಆಡುವ ಭಾರತ ತಂಡವನ್ನು ಭಾನುವಾರ ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ಅವರು ನಾಯಕತ್ವ ವಹಿಸಲಿದ್ದಾರೆ.

2022ರಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಸೆಮಿಫೈನಲ್ ನಂತರ ರೋಹಿತ್ ಮತ್ತು ಕೊಹ್ಲಿ ಅವರು ಟಿ20 ತಂಡದಲ್ಲಿ ಆಡಿರಲಿಲ್ಲ. ಆದರೆ ಈಗ ಗಾಯಗೊಂಡಿರುವ ಹಾರ್ದಿಕ್ ಪಾಂಡ್ಯ ಮತ್ತು ಸೂರ್ಯಕುಮಾರ್ ಯಾದವ್ ಅವರು ವಿಶ್ರಾಂತಿಯಲ್ಲಿರುವುದರಿಂದ ರೋಹಿತ್ ನಾಯಕತ್ವಕ್ಕೆ ಮರಳಿದ್ದಾರೆ. ಅಲ್ಲದೇ ಮುಂಬರಲಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಡುವ ಆಟಗಾರರನ್ನು ಸಿದ್ಧಗೊಳಿಸುವ ಪ್ರಕ್ರಿಯೆಯೂ ಇಲ್ಲಿಂದ ಆರಂಭವಾಗಲಿದೆ ಎಂದು ತಿಳಿದುಬಂದಿದೆ. ಇಬ್ಬರನ್ನೂ ಬಿಟ್ಟರೆ ಯುವ ಆಟಗಾರರೇ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾನ ಪಡೆದಿದ್ದಾರೆ. ಕೆ.ಎಲ್. ರಾಹುಲ್ ಈ ಸರಣಿಯಲ್ಲಿ ಆಡುತ್ತಿಲ್ಲ.

ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಆಕ್ಷರ್ ಪಟೇಲ್, ರವಿ ಬಿಷ್ಣೋಯಿ, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಆವೇಶ್ ಖಾನ್, ಮುಕೇಶ್ ಕುಮಾರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.