ಮುಂಬೈ: ಏಕದಿನ ಕ್ರಿಕೆಟ್ನಲ್ಲಿ 49ನೇ ಶತಕ ಬಾರಿಸಿ ತಮ್ಮ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿಗೆ ದಿಗ್ಗಜ ಕ್ರಿಕೆಟರ್ ಸಚಿನ್ ತೆಂಡೂಲ್ಕರ್ ವಿಶೇಷ ರೀತಿಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.

ಇಂದು(ನ.5) ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರ 35ನೇ ಹುಟ್ಟುಹಬ್ಬ. ಇಂದೇ ಅವರು ಕಲ್ಕತ್ತಾದ ಈಡೆನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ 37ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮಿಂಚಿನ ಪ್ರದರ್ಶನ ನೀಡಿದ ಕೊಹ್ಲಿ ತಮ್ಮ ಒಡಿಐ ಕ್ರಿಕೆಟ್ನ 49ನೇ ಶತಕ ಬಾರಿಸಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಹೆಸರಲ್ಲಿದ್ದ ಒಡಿಐ ಕ್ರಿಕೆಟ್ನಲ್ಲಿನ ಅತಿ ಹೆಚ್ಚು ಶತಕಗಳ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.

ಸಚಿನ್ ತೆಂಡೂಲ್ಕರ್ ಕೊಹ್ಲಿಯ ಫೋಟೋವನ್ನು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹಂಚಿಕೊಂಡಿದ್ದು, ಹೃದಯಪೂರ್ವಕ ಶುಭಾಶಯ ಕೋರಿದ್ದಾರೆ. ಆದಷ್ಟು ಬೇಗ 50 ಶತಕ ಬಾರಿಸಿ ತಮ್ಮ ಶತಕವನ್ನು ಮುರಿಯುವಂತೆ ಪ್ರೋತ್ಸಾಹಿಸಿದ್ದಾರೆ.

'ವಿರಾಟ್ ಚೆನ್ನಾಗಿ ಆಡಿದ್ದಾರೆ. ನನಗೆ 49 ರಿಂದ 50ಕ್ಕೆ ಹೋಗಲು 365 ದಿನಗಳು ಬೇಕಾಯಿತು (ತೆಂಡೂಲ್ಕರ್ ಅವರಿಗೆ ಈಗ 50 ವರ್ಷ. ಹೀಗಾಗಿ ಒಂದು ವರ್ಷ ಸಾಗಲು 50 ವರ್ಷ ಬೇಕಾಯಿತು ಎಂದು ಬರೆದುಕೊಂಡಿದ್ದಾರೆ) . ನೀವು ಮುಂದಿನ ಕೆಲವು ದಿನಗಳಲ್ಲಿ 49 ರಿಂದ 50ಕ್ಕೆ ಹೋಗಿ ನನ್ನ ದಾಖಲೆಯನ್ನು ಮುರಿಯುತ್ತೀರಿ ಎಂದು ನಾನು ಭಾವಿಸುತ್ತೇನೆ'. ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.